Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:1 - ಕನ್ನಡ ಸತ್ಯವೇದವು J.V. (BSI)

1 ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:1
47 ತಿಳಿವುಗಳ ಹೋಲಿಕೆ  

ಮತ್ತು ಪವಿತ್ರಾತ್ಮನು ದೇಹಾಕಾರವಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ - ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು.


ಯೆಹೋವನ ಮಾತೇನಂದರೆ - ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು; ನೀವು ನನ್ನನ್ನು ತಿಳಿದು ನಂಬಿ ನನ್ನನ್ನೇ ಪರಮಾತ್ಮನು ಎಂದು ಗ್ರಹಿಸುವ ಹಾಗೆ [ಇದನ್ನು ನಡಿಸಿದೆನು]; ನನಗಿಂತ ಮುಂಚೆ ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವದಿಲ್ಲ.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಆ ಕಲ್ಲನ್ನು ಮನುಷ್ಯರು ನಿರಾಕರಿಸಿದರೂ ದೇವರು ಅದನ್ನು ಆಯಲ್ಪಟ್ಟದ್ದೂ ಮಾನ್ಯವಾದದ್ದೂ ಎಂದು ಎಣಿಸಿದನು.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ದೇವರು ನಮ್ಮನ್ನು ಅಂಧಕಾರದ ದೊರೆತನದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ರಾಜ್ಯದೊಳಗೆ ಸೇರಿಸಿದನು.


ಹೇಗಂದರೆ ನಾವು ಪ್ರೀತಿಯಲ್ಲಿ ನಡೆದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು ನಮ್ಮನ್ನು ಜಗದುತ್ಪತ್ತಿಗೆ ಮುಂಚೆ ಕ್ರಿಸ್ತನಲ್ಲಿ ಆರಿಸಿಕೊಂಡನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆಯಲ್ಪಟ್ಟದ್ದು, ಮಾನ್ಯವಾದದ್ದು; ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ ಎಂದು ಶಾಸ್ತ್ರದಲ್ಲಿ ಬರೆದದೆ.


ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಆಗ ಆ ಮೋಡದೊಳಗಿಂದ - ಈತನು ನನ್ನ ಮಗನು. ನಾನು ಆರಿಸಿಕೊಂಡವನು; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಮಹಾಯಾಜಕನಾದ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಹಕಾರಿಗಳೂ ಕೇಳಿರಿ; ಇಗೋ, ಮೊಳಿಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೇನೆಂಬದಕ್ಕೆ ಇವರೇ ಮುಂಗುರುತು.


ಆತನು ದೇಶದೇಶಗಳ ವ್ಯಾಜ್ಯಗಳನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ [ಆಯುಧಗಳನ್ನು] ಕುಲುಮೆಗೆ ಹಾಕಿ ಕತ್ತಿಗಳನ್ನು ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ನ್ಯಾಯವು ಅಡವಿಯಲ್ಲಿಯೂ ನೆಲೆಗೊಳ್ಳುವದು, ಧರ್ಮವು ತೋಟದಲ್ಲಿ ಇದ್ದೇ ಇರುವದು.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಕರ್ತನು ನೇವಿುಸಿರುವ ಶುಭವರ್ಷವನ್ನು ಪ್ರಚುರಪಡಿಸುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂಬದು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ನಾನು ಭೂವಿುಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, ನೀನಂತು ಹೆದರಬೇಡ,


ಇವನು ಕೂಗಾಡುವದಿಲ್ಲ, ಆರ್ಭಟಿಸುವದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವದಿಲ್ಲ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಶೆಯಲ್ತೀಯೇಲನ ಮಗನೂ ನನ್ನ ಸೇವಕನೂ ಆದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವಾಗಿ ಮಾಡಿಕೊಳ್ಳುವೆನು, ಇದಕ್ಕೆ ನಿನ್ನನ್ನು ಆರಿಸಿಕೊಂಡಿದ್ದೇನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ಒಡಂಬಡಿಕೆಮಾಡಿಕೊಂಡು ಆಣೆಯಿಟ್ಟು - ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ ಎಂಬದೇ. ಸೆಲಾ.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು