Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:15 - ಕನ್ನಡ ಸತ್ಯವೇದವು J.V. (BSI)

15 ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ತಾರಿಸಿ ನದಿಗಳನ್ನು ಒಣದಿಣ್ಣೆ ಮಾಡಿ ಕೆರೆಗಳನ್ನು ಬತ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾಶಪಡಿಸುವೆನು ಬೆಟ್ಟಗುಡ್ಡಗಳನು ಒಣಗಿಸಿಬಿಡುವೆನು ಹುಲ್ಲು ಸಸಿಗಳನು. ಒಣನೆಲ ಮಾಡುವೆನು ನದಿಗಳನು ಬತ್ತಿಸಿಬಿಡುವೆನು ಕೆರೆಕುಂಟೆಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬೆಟ್ಟಗಳನ್ನೂ ಪರ್ವತಗಳನ್ನೂ ನಾಶಪಡಿಸುವೆನು. ಅಲ್ಲಿ ಬೆಳೆಯುವ ಸಸ್ಯಗಳನ್ನೆಲ್ಲಾ ಒಣಗಿಸಿಬಿಡುವೆನು. ನದಿಗಳನ್ನು ಒಣ ನೆಲವನ್ನಾಗಿ ಮಾರ್ಪಡಿಸುವೆನು; ನೀರಿನ ಹಳ್ಳಗಳನ್ನು ಒಣಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಬೆಟ್ಟಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ; ನದಿಗಳನ್ನು ದ್ವೀಪಗಳನ್ನಾಗಿಯೂ, ಕೆರೆಗಳನ್ನು ಬತ್ತಿಹೋಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:15
22 ತಿಳಿವುಗಳ ಹೋಲಿಕೆ  

ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಜಲರಾಶಿಗೆ - ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು ಎಂದು ನಾನು ಅಪ್ಪಣೆಕೊಡುವವನಾಗಿದ್ದೇನೆ;


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ಆಗ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವಾಯಿತು; ಮನುಷ್ಯರು ಭೂವಿುಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಲಿಲ್ಲ.


ಆರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಎಂಬ ಮಹಾ ನದಿಯ ಮೇಲೆ ಹೊಯ್ಯಲು ಅದರ ನೀರು ಇಂಗಿಹೋಯಿತು; ಇದರಿಂದ ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಯಿತು.


ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.


ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್‍ನದಿಯೆಲ್ಲಾ ತಳದ ತನಕ ಒಣಗುವದು, ಅಶ್ಶೂರದ ಗರ್ವವು ತಗ್ಗಿಸಲ್ಪಡುವದು, ಐಗುಪ್ತದ ರಾಜದಂಡವು ತಪ್ಪಿಹೋಗುವದು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಸ್ವಲ್ಪ ಕಾಲದ ಮೇಲೆ ನಾನು ಇನ್ನೊಂದೇ ಸಾರಿ ಆಕಾಶವನ್ನೂ ಭೂವಿುಯನ್ನೂ ಸಮುದ್ರವನ್ನೂ ಒಣನೆಲವನ್ನೂ ಅದುರಿಸಿ


ಸಮುದ್ರಮತ್ಸ್ಯಗಳು ಆಕಾಶಪಕ್ಷಿಗಳು ಭೂಜಂತುಗಳು ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳು ಭೂಮಂಡಲದ ಸಕಲಮನುಷ್ಯರೂ ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವವು, ಜರಿಗಳು ಕವಚಿಕೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.


ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.


ನನ್ನ ಸೃಷ್ಟಿಯ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.


ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂವಿುಯು ಗಡಗಡನೆ ಕಂಪಿಸಿತು; ಪರ್ವತಗಳ ಬುಡಗಳು ನಡುಗಿ ಕದಲಿದವು.


ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಕ್ಕುತ್ತಾ ಪುಡಿಪುಡಿಗೈದು ಗುಡ್ಡಗಳನ್ನು ಹೊಟ್ಟುಮಾಡುವಿ.


ನಾನು ರೋಷಾವಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ - ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಅದ್ಭುತಕಂಪನವಾಗುವದು ಖಂಡಿತ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು