Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:19 - ಕನ್ನಡ ಸತ್ಯವೇದವು J.V. (BSI)

19 ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧಕರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ಸೇವಕನಿಗಿಂತ ಕುರುಡರು ಯಾರು? ನನ್ನ ದೂತನಿಗಿಂತ ಕಿವುಡರು ಯಾರು? ನನ್ನ ಭಕ್ತನಿಗಿಂತ ಕುರುಡರು ಯಾರು? ಸರ್ವೇಶ್ವರನ ದಾಸನಿಗಿಂತ ಅಂಧಕರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬೇರೆ ಎಲ್ಲರಿಗಿಂತ ನನ್ನ ಸೇವಕನು ಕುರುಡನಾಗಿದ್ದಾನೆ. ಬೇರೆ ಎಲ್ಲರಿಗಿಂತ ನನ್ನ ದೂತನು ಕಿವುಡನಾಗಿದ್ದಾನೆ. ನಾನು ಒಡಂಬಡಿಕೆ ಮಾಡಿಕೊಂಡ ನನ್ನ ಸೇವಕನು ಪೂರ್ಣ ಕುರುಡನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಸೇವಕನಲ್ಲದೆ ಕುರುಡನು ಯಾರು? ನಾನು ಕಳುಹಿಸಿದ ಸೇವಕನಲ್ಲದೆ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಯೆಹೋವ ದೇವರ ಸೇವಕನಂತೆ ಕುರುಡನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:19
26 ತಿಳಿವುಗಳ ಹೋಲಿಕೆ  

ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ನರಪುತ್ರನೇ, ನೀನು ದ್ರೋಹಿವಂಶದ ಮಧ್ಯದಲ್ಲಿ ವಾಸಿಸುತ್ತೀ, ಆ ವಂಶದವರು ದ್ರೋಹಿಗಳಾಗಿರುವದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢಜನರೇ, ಯೆಹೋವನ ಈ ಮಾತನ್ನು ಕೇಳಿರಿ -


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.


ಯೇಸು ಅವರಿಗೆ - ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ; ನಮಗೆ ಕಣ್ಣು ಕಾಣುತ್ತವೆ ಅನ್ನುತ್ತೀರಾದ್ದರಿಂದ ನಿಮ್ಮ ಪಾಪವು ಉಳಿದದೆ.


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಅದಕ್ಕೆ ಆತನು - ನೀನು ಈ ಜನರ ಬಳಿಗೆ ಹೋಗಿ - ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,


ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ಕಾರಣವೇನಂದರೆ ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ, ಕಿವಿಯಿದ್ದರೂ ಕೇಳುವದಿಲ್ಲ ಮತ್ತು ತಿಳುಕೊಳ್ಳುವದಿಲ್ಲ.


ಬೇಡವಾದರೆ ಆ ಶತ್ರುಗಳು ನನ್ನ ಬಲವನ್ನು ಶರಣುಹೊಂದಲಿ, ನನ್ನ ಸಂಗಡ ಸಮಾಧಾನಕ್ಕೆ ಬರಲಿ, ನನ್ನೊಡನೆ ಸಂಧಿಮಾಡಿಕೊಳ್ಳಲಿ.


ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು, ಮೊಬ್ಬುಕತ್ತಲುಗಳಲ್ಲಿಯೂ ಕುರುಡರ ಕಣ್ಣು ಕಾಣುವದು.


ಕಣ್ಣಿದ್ದರೂ ಕುರುಡಾದ ಕಿವಿಯಿದ್ದರೂ ಕಿವುಡಾದ ಜನವನ್ನು ಕರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು