Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:25 - ಕನ್ನಡ ಸತ್ಯವೇದವು J.V. (BSI)

25 ಆಗ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹತ್ತಿತು, ಆದರೆ ಅವರು ತಿಳಿಯಲಿಲ್ಲ; ದಹಿಸಿತು, ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ಆತನು ತನ್ನ ಯುದ್ಧದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ, ಅವನಿಗೆ ತಿಳಿಯಲಿಲ್ಲ. ಅದು ಅವನನ್ನು ಸುಟ್ಟರೂ, ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:25
26 ತಿಳಿವುಗಳ ಹೋಲಿಕೆ  

ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.


ನೀನು ಯಾರಿಗೆ ಬೆದರಿ ಹೆದರಿದ್ದರಿಂದ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೆ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮಂದಟ್ಟುಮಾಡಿಕೊಳ್ಳದಿದ್ದರೆ ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮಂದಟ್ಟುಮಾಡಿಕೊಳ್ಳದ ಕಾರಣ ಅವುಗಳನ್ನು ಶಪಿಸೇ ಇದ್ದೇನೆ.


ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ನಾನು ಶಾಶ್ವತವಾದ ರಾಣಿ ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.


ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ತುಂಬಿತುಳುಕುವ ನಿನ್ನ ಕೋಪವನ್ನು ಎರಚಿ ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟುಹೋಗಿದೆ; ಪ್ರಜೆಯು ಅಗ್ನಿಗೆ ಆಹುತಿಯಾಗಿದೆ; ಅಣ್ಣನು ತಮ್ಮನನ್ನು ಕರುಣಿಸನು.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನು, ಆಗರ್ಭದ್ರೋಹಿ ಎನಿಸಿಕೊಂಡವನು ಎಂದು ನಾನು ತಿಳಿದುಕೊಂಡಿದ್ದೆನಷ್ಟೆ.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ಹೌದು, ಹಾಳು ಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾವನೂ ಮನಸ್ಸಿಗೆ ತಾರದ್ದರಿಂದ ದೇಶವೆಲ್ಲಾ ಹಾಳುಬಿದ್ದಿದೆ.


ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ ಸುತ್ತುಮುತ್ತಲೂ ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿ ಬಿಟ್ಟಿದ್ದಾನೆ.


ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ ವಿರೋಧಿಯಂತೆ ಬಲಗೈಯೆತ್ತಿ ನಿಂತು ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು