Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:5 - ಕನ್ನಡ ಸತ್ಯವೇದವು J.V. (BSI)

5 ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನೂ, ಅದರಿಂದ ಉತ್ಪತ್ತಿಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ, ಅದರಲ್ಲಿ ಸಂಚರಿಸುವವರಿಗೆ ಆತ್ಮವನ್ನೂ ಕೊಡುತ್ತೇನೆಂದು ದೇವರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:5
36 ತಿಳಿವುಗಳ ಹೋಲಿಕೆ  

ಭೂಮಂಡಲನಿವಾಸಿಗಳು ವಿುಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನವರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿಕಟ್ಟಿದ್ದಾನೆ.


ಭೂಲೋಕವನ್ನುಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ; ನನ್ನ ಕೈಗಳೇ ಆಕಾಶ ಮಂಡಲವನ್ನು ಹರಡಿದವು; ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ -


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ನನ್ನ ಕೈ ಭೂವಿುಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಸಿದ್ಧವಾಗಿ ನಿಲ್ಲುವವು.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಸರ್ವಕಾರ್ಯಕರ್ತನಾದ ಯೆಹೋವನು, ನಾನೊಬ್ಬನೇ ಗಗನಮಂಡಲವನ್ನು ಹರವಿ ಭೂಮಂಡಲವನ್ನು ವಿಸ್ತರಿಸುವವನಾಗಿದ್ದೇನೆ; ನನಗೆ ಸಹಾಯಕನುಂಟೋ?


ಎಲೈ, ಕರ್ತನಾದ ಯೆಹೋವನೇ! ಆಹಾ, ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನ ಶ್ವಾಸದಿಂದುಂಟಾಗಿದೆ.


ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ಪ್ರತಿಪ್ರಾಣಿಯ ಪ್ರಾಣವೂ ಸಮಸ್ತಮನುಷ್ಯರ ಆತ್ಮಗಳೂ ಆತನ ಕೈಯಲ್ಲಿರುವವು.


ಯಾವನು ಸಾಗರಸಮುದ್ರಗಳನ್ನು ಸೇರೆಯಿಂದ ಅಳತೆಮಾಡಿದನು? ಯಾವನು ಆಕಾಶಮಂಡಲದ ಪರಿಮಾಣವನ್ನು ಗೇಣಿನಿಂದ ನಿರ್ಣಯಿಸಿದನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?


ಆತನು ಭೂವಿುಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ; ಆತನ ಕೃಪೆಯು ಶಾಶ್ವತವಾದದ್ದು.


ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತಾಗಿ ಕಟ್ಟಿಕೊಂಡು ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ; ಸಮುದ್ರದ ನೀರನ್ನು ಕರೆದು ಭೂಮಂಡಲದ ಮೇಲೆ ಹೊಯ್ಯುತ್ತಾನೆ; ಯೆಹೋವನೆಂಬದೇ ಆತನ ನಾಮಧೇಯ.


ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವದಾದರೆ


ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾಣೆ,


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ಜಗತ್ತನ್ನೂ ಅದರಲ್ಲಿರುವ ಎಲ್ಲಾ ವಸ್ತುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;


ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿಕೊಂಡು ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದರಿಸುತ್ತಾನಲ್ಲಾ; ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.


ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ;


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸೆನು, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸೆನು ಎಂದು ರಹಸ್ಯವಾಗಿ ಪ್ರಮಾಣಮಾಡಲು


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು