Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:18 - ಕನ್ನಡ ಸತ್ಯವೇದವು J.V. (BSI)

18 ಆ ಯೆಹೋವನು ಹೀಗೆನ್ನುತ್ತಾನೆ - ಹಳೇ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನಕಾರ್ಯಗಳನ್ನು ಮರೆತುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಗತಿಸಿಹೋದ ಘಟನೆಗಳನ್ನು ನೆನೆಯಬೇಕಾಗಿಲ್ಲ ಪುರಾತನ ಕಾರ್ಯಗಳ ನೆನಸಿಕೊಳ್ಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಆದಿಯಲ್ಲಿ ನಡೆದ ಸಂಗತಿಗಳನ್ನು ಜ್ಞಾಪಕಮಾಡಿಕೊಳ್ಳಬೇಡ. ಬಹಳ ಕಾಲದ ಹಿಂದೆ ನಡೆದ ಸಂಗತಿಗಳನ್ನು ನೆನೆಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ. ಹಳೆಯ ಸಂಗತಿಗಳನ್ನು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:18
9 ತಿಳಿವುಗಳ ಹೋಲಿಕೆ  

ಇಗೋ, ನೂತನಾಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆಬಾರದು.


ಅಧಿಕವಾದ ಪ್ರಭಾವವುಳ್ಳದ್ದು ಬಂದದರಿಂದ ಮೊದಲಿದ್ದ ಪ್ರಭಾವವು ಅದರ ಬಳಿಯಲ್ಲಿ ಪ್ರಭಾವವಿಲ್ಲದ್ದಾಯಿತು.


ಆತನ ಸೇವಕನಾದ ಇಸ್ರಾಯೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,


ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು