Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:4 - ಕನ್ನಡ ಸತ್ಯವೇದವು J.V. (BSI)

4 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೆ ಬದಲಾಗಿ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀನೆನ್ನ ದೃಷ್ಟಿಗೆ ಅಮೂಲ್ಯನು, ಘನವಂತನು, ಅತಿಪ್ರಿಯನು. ಎಂದೇ ನಿನ್ನ ಪ್ರಾಣರಕ್ಷಣೆಗಾಗಿ ತ್ಯಜಿಸುವೆನು ಜನರನ್ನೂ ಜನಾಂಗಗಳನ್ನೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನನಗೆ ಅಮೂಲ್ಯನಾದುದರಿಂದ ನಾನು ನಿನ್ನನ್ನು ಗೌರವಿಸಿ ಪ್ರೀತಿಸುವೆನು. ನೀನು ವಾಸಿಸುವಂತೆ ನಾನು ನಿನಗೆ ಎಲ್ಲಾ ಜನರನ್ನು ಮತ್ತು ಜನಾಂಗಗಳನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಜನಾಂಗಗಳನ್ನೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:4
23 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ನೀವು ನನ್ನ ಮೇಲೆ ಮಮತೆಯಿಟ್ಟು ನನ್ನನ್ನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮ ಮೇಲೆ ಮಮತೆ ಇಡುತ್ತಾನಲ್ಲವೇ.


ಇಸ್ರಾಯೇಲು ಕೇವಲ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯನ್ನಿಟ್ಟು ಆ ನನ್ನ ಮಗನನ್ನು ಐಗುಪ್ತದೇಶದಿಂದ ಕರೆದೆನು.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು.


ಯಾಹುವು ಯಾಕೋಬನ ವಂಶದವರಾದ ಇಸ್ರಾಯೇಲ್ಯರನ್ನು ಸ್ವಕೀಯಜನವನ್ನಾಗಿ ಆದುಕೊಂಡನಲ್ಲಾ.


ಯೆಹೋವನೋ ನಿಮ್ಮ ವಿಷಯದಲ್ಲಿ - ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರೆಂದೂ


ಯಾಕಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಜನರೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವದಕ್ಕೆ ಆದುಕೊಂಡಿದ್ದಾನಲ್ಲಾ.


ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು. ನೀನು ನನ್ನ ಮೇಲೆ ಇಟ್ಟಂಥ ಪ್ರೀತಿಯು ಅವರಲ್ಲಿ ಇರಬೇಕೆಂದೂ ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ ಅಂದನು.


ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವೋ - ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ,


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.


ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬನ್ನು ತನಗೆ ಸೇರಿಸಿಕೊಳ್ಳಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.


ಆತನು ನಿಮ್ಮ ಪಿತೃಗಳನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೂ ಆದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು