Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:5 - ಕನ್ನಡ ಸತ್ಯವೇದವು J.V. (BSI)

5 ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಲಿಂದ ತರುವೆನು; ನಿನ್ನವರನ್ನು ಪಡುವಲಿಂದ ಕೂಡಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಆದ್ದರಿಂದ ಭಯಪಡಬೇಡ, ನಾನೇ ನಿನ್ನೊಂದಿಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ. ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು. ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:5
41 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.


ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣ ದಿಕ್ಕುಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಊಟಕ್ಕೆ ಕೂಡ್ರುವರು.


ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ನಿನ್ನನ್ನು ನಿರ್ಮಾಣಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ - ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನನ್ನ ಜನರನ್ನು ಮೂಡಣ ದೇಶದಿಂದಲೂ ಪಡುವಣ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.


ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.


ಯಾಕೋಬೇ, ನಿನ್ನವರನ್ನೆಲ್ಲಾ ಕೂಡಿಸೇ ಕೂಡಿಸುವೆನು; ಇಸ್ರಾಯೇಲಿನ ಜನಶೇಷವನ್ನು ಸೇರಿಸೇ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗಿಡುವೆನು, ಕಾವಲ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಹಾಕುವೆನು; ಜನರು ಗಿಜಿಗುಟ್ಟುವರು.


ಪೂರ್ವಪಶ್ಚಿಮೋತ್ತರಗಳಲ್ಲಿಯೂ ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.


ಆಲೋಚನೆಮಾಡಿಕೊಳ್ಳಿರಿ, ಅದು ಮುರಿದುಹೋಗುವದು; ಅಪ್ಪಣೆಮಾಡಿರಿ, ಅದು ನಿಲ್ಲದು; ದೇವರು ನಮ್ಮ ಕೂಡ ಇದ್ದಾನಷ್ಟೆ.


ನಾನು ಭೂವಿುಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, ನೀನಂತು ಹೆದರಬೇಡ,


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವಂತೆ ನೀನು ಇವರನ್ನು ಕಟ್ಟಿಕೊಳ್ಳುವಿ.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು.


ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು. ಇದು ಯೆಹೋವನ ನುಡಿ.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತದೇಶಗಳಿಂದಲೂ ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದನೋ ಅಲ್ಲಿಗೆ ತಿರಿಗಿ ಬರಮಾಡುವೆನು. ಇದು ಯೆಹೋವನ ನುಡಿ.


ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.


ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರುಷ ಒಂದು ಸುದ್ದಿಯು, ಮತ್ತೊಂದು ವರುಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.


ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟುಬರುವಂತೆ ನಾನು ಅವರನ್ನು ಹುರಿಗೊಳಿಸಿ ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು;


ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.


ಆಹಾ, ಮುಂದಿನ ಕಾಲದಲ್ಲಿ ಜನರು - ಇಸ್ರಾಯೇಲ್ಯರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬದಾಗಿ ಪ್ರಮಾಣಮಾಡುವದನ್ನು ಬಿಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು