ಯೆಶಾಯ 44:2 - ಕನ್ನಡ ಸತ್ಯವೇದವು J.V. (BSI)2 ನಿನ್ನನ್ನು ನಿರ್ಮಾಣಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ - ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ (ಇಸ್ರೇಲೇ), ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ. ಅಧ್ಯಾಯವನ್ನು ನೋಡಿ |