Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:22 - ಕನ್ನಡ ಸತ್ಯವೇದವು J.V. (BSI)

22 ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. ನನ್ನ ಕಡೆಗೆ ತಿರುಗಿಕೋ. ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:22
39 ತಿಳಿವುಗಳ ಹೋಲಿಕೆ  

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.


ಅವರು ನನಗೆ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡಿಸಿರುವ ಅಪರಾಧಗಳನ್ನೆಲ್ಲಾ ಕ್ಷವಿುಸುವೆನು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆಯಿಂದ ಹಾರಿಹೋಗಿರಿ; ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ, ಭೂವಿುಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ಹೇಳಿರಿ.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಚೀಯೋನ್ ಪಟ್ಟಣಕ್ಕೆ [ನನ್ನ] ನ್ಯಾಯದ ಮೂಲಕವೂ ದೇಶಾಂತರದಿಂದ ಬಿಡುಗಡೆಯಾಗಿ ಬರುವ ಅದರ ಪ್ರಜೆಗಳಿಗೆ [ನನ್ನ] ಧರ್ಮದ ಮೂಲಕವೂ ವಿಮೋಚನೆಯಾಗುವದು.


ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.


ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ ತನ್ನ ವಿುಂಚಿನ ಮೇಘಮಂಡಲವನ್ನು ಹರಡುವನು.


ಅವರ ಅಪರಾಧವನ್ನು ಕ್ಷವಿುಸಬೇಡ; ನಿನ್ನೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿದ್ದಾರಲ್ಲಾ.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ; ಅವರ ಅಪರಾಧವನ್ನು ಕ್ಷವಿುಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು.


ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರಿಗಿಕೊಳ್ಳಿರಿ.


ಚೀಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು; ಅಲ್ಲಿಯ ಜನರ ಪಾಪವು ಪರಿಹಾರವಾಗುವದು.


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಕಡೆಗೆ ಪುನಃ ತಿರುಗಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ; ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲ್ಯರನ್ನು ಬಿಡಿಸಿ ಅವರಿಗೆ ಇಷ್ಟೆಲ್ಲಾ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷಿಸಿ -


ಜನಾಂಗಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ದೇಶಕ್ಕೋಸ್ಕರವೂ ದೋಷಪರಿಹಾರಮಾಡುತ್ತಾನೆ.


ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;


ಆತನೇ ಇಸ್ರಾಯೇಲನ್ನು ಅದರ ಸಕಲಪಾಪಗಳಿಂದ ವಿಮೋಚಿಸುವನು.


ಯೆರೂಸಲೇವಿುನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ದೇವದೂತನು ತನ್ನ ಸೇವಕರಿಗೆ - ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ ಎಂದು ಅಪ್ಪಣೆಕೊಟ್ಟು ಅವನಿಗೆ - ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರಗಳನ್ನು ತೊಡಿಸುವೆನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು