Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:24 - ಕನ್ನಡ ಸತ್ಯವೇದವು J.V. (BSI)

24 ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಸರ್ವಕಾರ್ಯಕರ್ತನಾದ ಯೆಹೋವನು, ನಾನೊಬ್ಬನೇ ಗಗನಮಂಡಲವನ್ನು ಹರವಿ ಭೂಮಂಡಲವನ್ನು ವಿಸ್ತರಿಸುವವನಾಗಿದ್ದೇನೆ; ನನಗೆ ಸಹಾಯಕನುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ನಿನ್ನನ್ನು ಗರ್ಭದಿಂದ ರೂಪಿಸಿದವರೂ ನಿನ್ನ ವಿಮೋಚಕರೂ ಆದ ಯೆಹೋವ ದೇವರು ಇಂತೆನ್ನುತ್ತಾರೆ: “ಎಲ್ಲವನ್ನು ಉಂಟುಮಾಡಿದ ಯೆಹೋವ ದೇವರು ನಾನೇ. ನಾನೊಬ್ಬನೇ ಆಕಾಶವನ್ನು ವಿಸ್ತರಿಸಿ, ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:24
44 ತಿಳಿವುಗಳ ಹೋಲಿಕೆ  

ಭೂಲೋಕವನ್ನುಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ; ನನ್ನ ಕೈಗಳೇ ಆಕಾಶ ಮಂಡಲವನ್ನು ಹರಡಿದವು; ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -


ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.


ಆಕಾಶಮಂಡಲವನ್ನು ಹರಡಿ ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟಿಯಾ? ನಾಶಮಾಡಬೇಕೆಂದು [ಬಾಣವನ್ನು] ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ತಾನೇ ಇದೆ?


ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲೋಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.


ನಿನ್ನನ್ನು ನಿರ್ಮಾಣಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ - ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ನಿಮ್ಮ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ನಿಮಗೋಸ್ಕರ [ದೂತನನ್ನು] ಬಾಬೆಲಿಗೆ ಕಳುಹಿಸಿ ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯಿತರನ್ನಾಗಿ ಅಟ್ಟಿಬಿಡುವೆನು.


ಭೂಮಂಡಲನಿವಾಸಿಗಳು ವಿುಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನವರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿಕಟ್ಟಿದ್ದಾನೆ.


ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.


ಆತನ ಮೂಲಕವಾಗಿ ಸಮಸ್ತವು ಉಂಟಾಯಿತು; ಉಂಟಾಗಿರುವ ವಸ್ತುಗಳಲ್ಲಿ ಆತನಿಲ್ಲದೆ ಒಂದಾದರೂ ಉಂಟಾಗಲಿಲ್ಲ.


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ನನ್ನ ಕೈ ಭೂವಿುಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಸಿದ್ಧವಾಗಿ ನಿಲ್ಲುವವು.


ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿದ್ದೀ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿದ್ದೀ.


ಆತನು ಶೂನ್ಯದ ಮೇಲೆ [ಆಕಾಶದ] ಉತ್ತರ ದಿಕ್ಕನ್ನು ವಿಸ್ತರಿಸಿ ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗಹಾಕಿದ್ದಾನೆ.


ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ಕರೆದ ದೇವರು


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.


ಅವರ ರಕ್ಷಕನು ಬಲಿಷ್ಠ. ಸೇನಾಧೀಶ್ವರನಾದ ಯೆಹೋವನೆಂಬದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.


ನಾನು ಹುಟ್ಟಿದಂದಿನಿಂದ ನಿನ್ನನ್ನೇ ಆತುಕೊಂಡಿದ್ದೇನೆ; ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವದು ನಿನ್ನಲ್ಲಿಯೇ.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.


ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.


ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ದೇವರು ತಮ್ಮ ಶರಣನೂ ಪರಾತ್ಪರನು ತಮ್ಮ ವಿಮೋಚಕನೂ ಆಗಿದ್ದಾನೆ ಎಂಬದನ್ನು ನೆನಪಿಗೆ ತಂದುಕೊಳ್ಳುವರು.


ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಹೊಟ್ಟೆಯಲ್ಲಿ ರೂಪಿಸಿದನಲ್ಲವೇ.


ತಗಡು ಬಡಿದು ಎರಕದ ದರ್ಪಣದಷ್ಟು ಗಟ್ಟಿಯಾಗಿರುವ ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ?


ಆತನು ಭೂವಿುಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ; ಆತನ ಕೃಪೆಯು ಶಾಶ್ವತವಾದದ್ದು.


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ -


ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ವರ್ಷಿಸು, ಗಗನವು ಸುರಿಸಲಿ; ಭೂವಿುಯು ಒಡೆದು ರಕ್ಷಣೆಯನ್ನು ಮೊಳೆಯಿಸಿ ಅದರೊಡನೆ ನೀತಿಫಲವನ್ನು ಬೆಳೆಯಿಸಲಿ, ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು