Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:27 - ಕನ್ನಡ ಸತ್ಯವೇದವು J.V. (BSI)

27 ಜಲರಾಶಿಗೆ - ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು ಎಂದು ನಾನು ಅಪ್ಪಣೆಕೊಡುವವನಾಗಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಗಾಧಕ್ಕೆ, ‘ಒಣಗಿಸಿಬಿಡುವೆನು,’ ‘ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು,’ ಎಂದು ಅನ್ನುವವನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:27
14 ತಿಳಿವುಗಳ ಹೋಲಿಕೆ  

ಆದದರಿಂದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಪಕ್ಷವಾಗಿ ವ್ಯಾಜ್ಯವಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ಬೇಗೆಯು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ಅಕಟವಿಕಟ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;


ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ತಾರಿಸಿ ನದಿಗಳನ್ನು ಒಣದಿಣ್ಣೆ ಮಾಡಿ ಕೆರೆಗಳನ್ನು ಬತ್ತಿಸುವೆನು.


ಆರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಎಂಬ ಮಹಾ ನದಿಯ ಮೇಲೆ ಹೊಯ್ಯಲು ಅದರ ನೀರು ಇಂಗಿಹೋಯಿತು; ಇದರಿಂದ ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಯಿತು.


ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡುಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ ಎಂದು ತಿಳಿಸುವರು.


ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ; ಸೇನಾಧೀಶ್ವರನಾದ ಯೆಹೋವನೆಂಬದೇ ನನ್ನ ನಾಮಧೇಯ.


ಯಾವನು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,


ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.


ಅವರ ಮಧ್ಯದಲ್ಲಿ ತನ್ನಪವಿತ್ರಾತ್ಮವನ್ನಿರಿಸಿ ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದರಿಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಭೇದಿಸಿ


ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್‍ನದಿಯೆಲ್ಲಾ ತಳದ ತನಕ ಒಣಗುವದು, ಅಶ್ಶೂರದ ಗರ್ವವು ತಗ್ಗಿಸಲ್ಪಡುವದು, ಐಗುಪ್ತದ ರಾಜದಂಡವು ತಪ್ಪಿಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು