ಯೆಶಾಯ 44:3 - ಕನ್ನಡ ಸತ್ಯವೇದವು J.V. (BSI)3 ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು. ಅಧ್ಯಾಯವನ್ನು ನೋಡಿ |