ಯೆಶಾಯ 44:5 - ಕನ್ನಡ ಸತ್ಯವೇದವು J.V. (BSI)5 [ಅನ್ಯಜನರಲ್ಲಿ] ಒಬ್ಬನು - ನಾನು ಯೆಹೋವನ ಭಕ್ತನು ಎಂದು ಹೇಳಿಕೊಳ್ಳುವನು; ಇನ್ನೊಬ್ಬನು ಯಾಕೋಬ್ಯನು ಎನಿಸಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಯೆಹೋವದಾಸನು ಎಂದು ಬರೆದುಕೊಂಡು ಇಸ್ರಾಯೇಲ್ಯನೆಂಬ ಬಿರುದನ್ನು ಧರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 (ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು, ‘ನಾನು ಯೆಹೋವನವನು’ ಎಂದು ಸಹಿ ಹಾಕುವನು. ಮತ್ತೊಬ್ಬನು, ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಒಬ್ಬನು, ‘ನಾನು ಯೆಹೋವನವನು,’ ಅನ್ನುವನು, ಇನ್ನೊಬ್ಬನು ನಾನು, ‘ಯಾಕೋಬನ ಹೆಸರಿನವನು,’ ಎಂದು ಹೇಳಿಕೊಳ್ಳುವನು. ಮತ್ತೊಬ್ಬನು ತನ್ನ ಕೈಯ ಮೇಲೆ, ‘ಯೆಹೋವ ದೇವರಿಗೆ ಸ್ವಂತ,’ ಎಂದು ಬರೆಯಿಸಿಕೊಂಡು, ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡಹೆಸರನ್ನು ಇಟ್ಟುಕೊಳ್ಳುವನು. ಅಧ್ಯಾಯವನ್ನು ನೋಡಿ |