ಯೆಶಾಯ 45:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು. ಅಧ್ಯಾಯವನ್ನು ನೋಡಿ |