Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:10 - ಕನ್ನಡ ಸತ್ಯವೇದವು J.V. (BSI)

10 ನೀನು ಹುಟ್ಟಿಸುವದೇನು ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನ ಗತಿ ಗತಿಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ನೀನು ಹುಟ್ಟಿಸುವುದೇನು’ ಎಂದು ತಂದೆಯನು ಕೇಳುವವನಿಗೆ ಧಿಕ್ಕಾರ ! ‘ನೀನು ಹೆರುವುದೇನು’ ಎಂದು ತಾಯಿಯನು ಕೇಳುವವನಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಂದೆಯು ಮಕ್ಕಳನ್ನು ಹುಟ್ಟಿಸುತ್ತಾನೆ. ಮಕ್ಕಳು ತಂದೆಯನ್ನು, ‘ನನಗೆ ಜೀವ ಯಾಕೆ ಕೊಟ್ಟೆ?’ ಎಂದು ಕೇಳಲಾಗುವುದಿಲ್ಲ. ಮಕ್ಕಳು ತಮ್ಮ ತಾಯಿಗೆ, ‘ನನ್ನನ್ನು ಯಾಕೆ ಹೆತ್ತದ್ದು ಎಂದು ಕೇಳಲಾಗುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನು ಹುಟ್ಟಿಸಿದ್ದು ಏಕೆ? ಎಂದು ತನ್ನ ತಂದೆಯನ್ನು ಕೇಳುವವನಿಗೂ, ‘ನೀನು ಹಡೆದದ್ದು ಏಕೆ?’ ಎಂದು ತಾಯಿಗೆ ಕೇಳುವವನಿಗೂ ಶಾಪ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:10
5 ತಿಳಿವುಗಳ ಹೋಲಿಕೆ  

ಲೇವಿಯರು - ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ.


ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣು ಮಡಕೆಗಳಲ್ಲಿ ಅವನೂ ಒಂದು ಮಡಕೆಯಲ್ಲವೆ. ಮಣ್ಣು - ಏನು ಮಾಡುತ್ತೀ ಎಂದು ರೂಪಿಸುವವನನ್ನು ಕೇಳುವದುಂಟೇ? ನಿನ್ನ ಕಾರ್ಯವು [ನಿನ್ನ ವಿಷಯವಾಗಿ] ಅವನಿಗೆ ಕೈಯಿಲ್ಲ ಅಂದೀತೇ?


[ಆದರೂ] ಇಸ್ರಾಯೇಲ್ಯರ ಸದಮಲಸ್ವಾವಿುಯೂ ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ - ಭವಿಷ್ಯತ್ತುಗಳ ವಿಷಯವಾಗಿ ನನ್ನನ್ನು ವಿಚಾರಿಸಿರಿ, ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು