ಯೆಶಾಯ 45:12 - ಕನ್ನಡ ಸತ್ಯವೇದವು J.V. (BSI)12 ಭೂಲೋಕವನ್ನುಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ; ನನ್ನ ಕೈಗಳೇ ಆಕಾಶ ಮಂಡಲವನ್ನು ಹರಡಿದವು; ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನುಷ್ಯನನ್ನು ಸೃಷ್ಟಿಸಿದೆನು. ನಾನೇ, ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು. ನಾನು ಅದರ ನಕ್ಷತ್ರಸೈನ್ಯಕ್ಕೆಲ್ಲಾ ಅಪ್ಪಣೆಕೊಟ್ಟೆನು. ಅಧ್ಯಾಯವನ್ನು ನೋಡಿ |