Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:13 - ಕನ್ನಡ ಸತ್ಯವೇದವು J.V. (BSI)

13 ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇವಿುಸಿದ್ದೇನೆ, ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು; ಅವನು ನನ್ನ ಪಟ್ಟಣವನ್ನು ತಿರಿಗಿ ಕಟ್ಟಿ ಕ್ರಯವನ್ನಾಗಲಿ ಬಹುಮಾನವನ್ನಾಗಲಿ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವನು ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನೇ, ಅವನನ್ನು ನೀತಿಯಲ್ಲಿ ಎಬ್ಬಿಸಿದ್ದೇನೆ. ಅವನ ಮಾರ್ಗಗಳನ್ನು ಸರಾಗ ಮಾಡುತ್ತೇನೆ. ಅವನು ನನ್ನ ಪಟ್ಟಣವನ್ನು ಕಟ್ಟಿ, ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ, ನನ್ನ ಸೆರೆಯವರನ್ನು ಕಳುಹಿಸಿಬಿಡುವನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:13
19 ತಿಳಿವುಗಳ ಹೋಲಿಕೆ  

ಮೂಡಲಲ್ಲಿ ಒಬ್ಬನನ್ನು ಎಬ್ಬಿಸಿ ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು ಅವನನ್ನು ರಾಜರ ಮೇಲೆ ಆಳಗೊಡಿಸಿ ಅವರ ಕತ್ತಿಯನ್ನು ದೂಳನ್ನಾಗಿಯೂ ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲನ್ನಾಗಿಯೂ ಮಾಡಿ


ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ನಾನು ಬಡಗಲಿಂದ ಒಬ್ಬನನ್ನು ಎಬ್ಬಿಸಿ ಕರತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿಂದ ಬಂದಿದ್ದಾನೆ; ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಮೇಲೆ ಬಿದ್ದು ಕುಂಬಾರನು ಜೇಡಿಯನ್ನು ತುಳಿಯುವ ಹಾಗೆ ತುಳಿಯುವನು.


ಇಗೋ, ಅವರಿಗೆ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು; ಇವರು ಬೆಳ್ಳಿಯನ್ನು ಲಕ್ಷಿಸರು, ಬಂಗಾರವನ್ನು ಪ್ರೀತಿಸರು.


ಮೂಡಲಿಂದ ಹದ್ದು ಎರಗಲಿ ಎಂದು, ಅಂದರೆ ನನ್ನ ಸಂಕಲ್ಪವನ್ನು ನೆರವೇರಿಸತಕ್ಕವನು ದೂರದೇಶದಿಂದ ಬರಲಿ ಎಂದು ಕೂಗಿದ್ದೇನೆ; ನಾನು ನುಡಿದಿದ್ದೇನೆ, ಈಡೇರಿಸುವೆನು; ಆಲೋಚಿಸಿದ್ದೇನೆ, ಸಾಧಿಸುವೆನು.


ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.


ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಯೆಹೂದದೇಶದ ಯೆರೂಸಲೇವಿುಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ; ಅವರ ದೇವರು ಅವರ ಸಂಗಡ ಇರಲಿ.


ಈಗಲೂ ಅನ್ಯರು ನನ್ನ ಜನರನ್ನು ಹಕ್ಕಿಲ್ಲದೆ ಒಯ್ದಿರಲು ನಾನು ಇಲ್ಲಿ ಸುಮ್ಮನಿರುವದು ಹೇಗೆ? ನನ್ನ ಪ್ರಜೆಯನ್ನು ಆಳುವವರು [ರೌದ್ರದಿಂದ] ಕಿರಚುತ್ತಾರೆ; ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ನಿನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ಪಟ್ಟಣಗಳನ್ನು ಕೆಡವಿ ಲೋಕವನ್ನು ಕಾಡನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ? ಅಂದುಕೊಳ್ಳುವರು.


ನಾನು ನಿನ್ನ ಮುಂದೆ ಹೋಗಿ ದಿಣ್ಣೆಗಳನ್ನು ಸಮಮಾಡುವೆನು, ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.


ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು; ನೀನೀಗ ಪಟ್ಟಣದೊಳಗಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ; ಅಲ್ಲೇ ನಿನಗೆ ಉದ್ಧಾರವಾಗುವದು, ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು