Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:18 - ಕನ್ನಡ ಸತ್ಯವೇದವು J.V. (BSI)

18 ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಕಾಶಗಳನ್ನು ನಿರ್ಮಿಸಿದ ಯೆಹೋವ ದೇವರು ಇಂತೆನ್ನುತ್ತಾನೆ, “ದೇವರು ತಾನೇ ಭೂಮಿಯನ್ನು ನಿರ್ಮಿಸಿ, ಅದನ್ನು ಉಂಟುಮಾಡಿದನು. ಆತನೇ ಅದನ್ನು ಸ್ಥಾಪಿಸಿದನು. ಅದನ್ನು ವ್ಯರ್ಥವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದನು. ನಾನೇ ಯೆಹೋವ ದೇವರು, ನಾನಲ್ಲದೆ ಇನ್ನಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:18
16 ತಿಳಿವುಗಳ ಹೋಲಿಕೆ  

ಪರಲೋಕವು ಯೆಹೋವನದು; ಭೂಲೋಕವನ್ನು ನರಸಂತಾನಕ್ಕೆ ಕೊಟ್ಟಿದ್ದಾನೆ.


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ಭೂಲೋಕವನ್ನುಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ; ನನ್ನ ಕೈಗಳೇ ಆಕಾಶ ಮಂಡಲವನ್ನು ಹರಡಿದವು; ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -


ಭೂವಿುಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು; ಆದಿಸಾಗರದ ಮೇಲೆ ಕತ್ತಲಿತ್ತು; ದೇವರಾತ್ಮವು ಜಲಸಮೂಹಗಳ ಮೇಲೆ ಚಲಿಸುತ್ತಿತ್ತು.


ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ - ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.


ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.


ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.


ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಟಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂವಿುಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಸರ್ವಕಾರ್ಯಕರ್ತನಾದ ಯೆಹೋವನು, ನಾನೊಬ್ಬನೇ ಗಗನಮಂಡಲವನ್ನು ಹರವಿ ಭೂಮಂಡಲವನ್ನು ವಿಸ್ತರಿಸುವವನಾಗಿದ್ದೇನೆ; ನನಗೆ ಸಹಾಯಕನುಂಟೋ?


ನನ್ನ ಕೈ ಭೂವಿುಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಸಿದ್ಧವಾಗಿ ನಿಲ್ಲುವವು.


ಆಕಾಶಮಂಡಲವನ್ನು ಹರಡಿ ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟಿಯಾ? ನಾಶಮಾಡಬೇಕೆಂದು [ಬಾಣವನ್ನು] ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ತಾನೇ ಇದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು