Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:19 - ಕನ್ನಡ ಸತ್ಯವೇದವು J.V. (BSI)

19 ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:19
45 ತಿಳಿವುಗಳ ಹೋಲಿಕೆ  

ನನ್ನ ಬಳಿಗೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, [ಭೂವಿುಯು] ಉಂಟಾದಂದಿನಿಂದ ಅಲ್ಲಿ ಇದ್ದೇನೆ. (ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.)


ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ;


ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.


ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು; ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ.


ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂಬ ದುರಭಿಪ್ರಾಯಪಟ್ಟು ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.


ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯಸಂಧನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.


ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಮಂಡಲಿಯಾದ ಸಮಸ್ತ ಇಸ್ರಾಯೇಲ್ಯರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೇ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವಾಸ್ತ್ಯವಾಗಿರುವದು.


ಯೇಸು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ - ನನ್ನನ್ನು ಬಲ್ಲಿರಿ, ನಾನು ಎಲ್ಲಿಯವನೆಂದು ಬಲ್ಲಿರಿ ನಿಜವೇ. ಆದರೂ ನಾನು ನನ್ನಷ್ಟಕ್ಕೆ ಬಂದವನಲ್ಲ, ನನ್ನನ್ನು ಕಳುಹಿಸಿದಾತನು ನಿಜವಾದವನು; ನೀವು ಆತನನ್ನು ಅರಿತವರಲ್ಲ.


ನೋಡಿರಿ, ಇವನು ಧಾರಾಳವಾಗಿ ಮಾತಾಡುತ್ತಾನೆ, ಅವರು ಅವನಿಗೆ ಏನೂ ಹೇಳುವದಿಲ್ಲ. ಹಿರೀಸಭೆಯವರು ಇವನೇ ಬರಬೇಕಾದ ಕ್ರಿಸ್ತನೆಂದು ನಿಶ್ಚಯಮಾಡಿಕೊಂಡಿದ್ದಾರೇನೋ?


ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ.


ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.


ಪೇಟೆಯ ಅಗ್ರಸ್ಥಾನದಲ್ಲಿಯೂ ಊರಬಾಗಿಲಿನಲ್ಲಿಯೂ ಆಕೆಯು ನುಡಿಯುವದೇನಂದರೆ -


ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ.


ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವದು; ಆತನ ಬಲವಾದ ರೌದ್ರಕ್ಕೆ ಆತನನ್ನು ತೊರೆದುಬಿಟ್ಟವರೆಲ್ಲರೂ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವದಕ್ಕೋಸ್ಕರ ಸೈನ್ಯವನ್ನೂ ಅಶ್ವಬಲವನ್ನೂ ಕೇಳಿಕೊಳ್ಳುವದಕ್ಕೆ ನಾಚಿಕೊಂಡಿದ್ದೆನು.


ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು,


ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ ತಿರುಗಿ ಆತನ ಪ್ರಸನ್ನತೆಯನ್ನು ಆಶಿಸಿ -


ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು;


ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಯಾಕೋಬಿನಿಂದ ಸಂತಾನವನ್ನು ಹೊರಪಡಿಸುವೆನು, ಯೆಹೂದವಂಶದಿಂದ ನನ್ನ ಪರ್ವತಗಳ ಸ್ವಾಸ್ತ್ಯದ ಬಾಧ್ಯಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವಾಸ್ತ್ಯವನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ.


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು