Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:2 - ಕನ್ನಡ ಸತ್ಯವೇದವು J.V. (BSI)

2 ನಾನು ನಿನ್ನ ಮುಂದೆ ಹೋಗಿ ದಿಣ್ಣೆಗಳನ್ನು ಸಮಮಾಡುವೆನು, ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು. ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಮುಂದೆ ಸಾಗುವೆನು ನಾನು ಸಮಮಾಡುವೆನು ಬೆಟ್ಟಗುಡ್ಡಗಳನು ಒಡೆದುಹಾಕುವೆನು ಕಂಚಿನ ಕದಗಳನು ಮುರಿದುಬಿಡುವೆನು ಕಬ್ಬಿಣದ ಅಗುಳಿಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೈರಸನೇ, ನಿನ್ನ ಸೈನ್ಯವು ಮುನ್ನುಗ್ಗುವದು. ನಾನು ನಿನ್ನ ಮುಂದೆ ಹೋಗಿ ಪರ್ವತಗಳನ್ನು ನೆಲಸಮ ಮಾಡುವೆನು. ಹಿತ್ತಾಳೆಯ ನಗರ ದ್ವಾರಗಳನ್ನು ಪುಡಿಪುಡಿ ಮಾಡುವೆನು. ದ್ವಾರಗಳ ಕಬ್ಬಿಣದ ಅಗುಳಿಗಳನ್ನು ತುಂಡು ಮಾಡಿ ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿನ್ನ ಮುಂದೆ ಹೋಗಿ ಬೆಟ್ಟಗುಡ್ಡಗಳನ್ನು ಸಮಮಾಡಿ, ಕಂಚಿನ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:2
17 ತಿಳಿವುಗಳ ಹೋಲಿಕೆ  

ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬೈಲುಸೀಮೆಯಾಗುವದು, ಕೊರಕಲ ನೆಲವು ಸಮವಾಗುವದು.


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ಆತನು ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಅಬಲರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿಯಿಕ್ಕಿದೆ, ಅದರ ಅಗುಳಿಗಳು ಮುರಿದುಹೋಗಿವೆ;


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕುಂದಿಹೋಗಿರಿ! ಬಡಗಲಿಂದ ಹೊಗೆಯು ಬರುತ್ತಿದೆ. ಆ ವ್ಯೂಹದಲ್ಲಿ ಹಿಂದು ಬೀಳುವವರಿಲ್ಲ.


ಪಟ್ಟಣದಲ್ಲಿ ಹಾಳೇ ಉಳಿದಿದೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.


ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇವಿುಸಿದ್ದೇನೆ, ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು; ಅವನು ನನ್ನ ಪಟ್ಟಣವನ್ನು ತಿರಿಗಿ ಕಟ್ಟಿ ಕ್ರಯವನ್ನಾಗಲಿ ಬಹುಮಾನವನ್ನಾಗಲಿ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವನು ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.


ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ; ಅವನ ಮಾರ್ಗವು ಸಾರ್ಥಕವಾಗುವದು.


ನೀನು ಹೋಗಿ ಹನನ್ಯನಿಗೆ - ಯೆಹೋವನು ಇಂತೆನ್ನುತ್ತಾನೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿ, ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು,


ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ - ಬಾಬೆಲಿನ ಗಾತ್ರವಾದ ಪೌಳಿ ಗೋಡೆಯು ಸಂಪೂರ್ಣವಾಗಿ ನೆಲಸಮವಾಗುವದು, ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವದು.


ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.


ಆಹಾ, ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ.


[ಶತ್ರುಗಳು] ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ ಬೋಳುಬೆಟ್ಟದ ಮೇಲೆ ಧ್ವಜವೆತ್ತಿರಿ, ಕೂಗಿ ಅವರನ್ನು ಕರೆಯಿರಿ, ಕೈಸನ್ನೆಮಾಡಿರಿ.


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಡುವಲಿಗೂ ಬಡಗಲಿಗೂ ತೆಂಕಲಿಗೂ ಹಾದಾಡುತ್ತಿತ್ತು; ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು; ಅದರ ಕೈಯಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ; ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು