Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:21 - ಕನ್ನಡ ಸತ್ಯವೇದವು J.V. (BSI)

21 ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:21
33 ತಿಳಿವುಗಳ ಹೋಲಿಕೆ  

ನಾನೇ ಯೆಹೋವ, ಇನ್ನು ಯಾವನೂ ಅಲ್ಲ, ನಾನು ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.


ನಾನೇ, ನಾನೇ ಯೆಹೋವನು; ನಾನು ಹೊರತು ಯಾವ ರಕ್ಷಕನೂ ಇಲ್ಲ.


ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು [ಇವರ ಮಾತನ್ನು] ಕೇಳಿ ನಿಜವೆಂದು ಹೇಳಲಿ.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ನೀವೆಲ್ಲರು ಕೂಡಿಕೊಂಡು ಕೇಳಿರಿ! ಇವರಲ್ಲಿನ ಯಾವ ದೇವರು ಈ ಸಂಗತಿಗಳನ್ನು ಅರುಹಿದ್ದಾನೆ? ಯೆಹೋವನ ಪ್ರೀತಿಪಾತ್ರನು ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು, ಕಸ್ದೀಯರ ಮೇಲೆ ಕೈಮಾಡುವನು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.


ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.


ಯೆಹೋವನೆಂಬ ನಾನು ನಿನ್ನ ದೇವರಾಗಿದ್ದೇನಷ್ಟೆ, ಇಸ್ರಾಯೇಲ್ಯರ ಸದಮಲಸ್ವಾವಿುಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನಗೆ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ.


ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು, ಹೌದು, ನನ್ನ ಬಾಯಿಂದ ಹೊರಟವು, ಪ್ರಕಟಿಸಿದೆನು; ನಾನು ತಟ್ಟನೆ ನಡಿಸಲು ನೆರವೇರಿದವು.


ಕಾರ್ಯವು ನಡೆಯುವದಕ್ಕೆ ಮುಂಚೆ [ಇವರಲ್ಲಿ] ಯಾವನು ಅದನ್ನು ಅರುಹಿದ್ದಾನೆ? ಅರುಹಿದ್ದರೆ [ಅವನು ನಿಜ ದೇವರೆಂದು] ನಮಗೆ ಗೊತ್ತಾಗುವದು; ಯಾವನು ಮುಂತಿಳಿಸಿದ್ದಾನೆ? ತಿಳಿಸಿದ್ದರೆ ಅವನನ್ನು ಸತ್ಯವಂತನೆನ್ನುವೆವು. ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವದಿಲ್ಲ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ನಿನ್ನ ಅದ್ಭುತಕೃತ್ಯವರ್ಣನೆಯ ಪದಗಳನ್ನು ಹಾಡುತ್ತಾ ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.


ಆದಿಯಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ ಎಂದು ಬರೆದದೆ.


ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಅವು ಐಗುಪ್ತದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ ಸಾಕ್ಷಿಯಾಗಿಯೂ ಇರುವವು; ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನುದ್ಧರಿಸುವನು.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ನಾನಾದರೋ ನೀನು ಐಗುಪ್ತದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ. ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ವಿನಹ ಯಾವ ರಕ್ಷಕನೂ ಇಲ್ಲ.


ಅದು ಯೆಹೋವನಿಗೆ ಗೊತ್ತು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವದು.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು