Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:23 - ಕನ್ನಡ ಸತ್ಯವೇದವು J.V. (BSI)

23 ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:23
29 ತಿಳಿವುಗಳ ಹೋಲಿಕೆ  

ಆದದರಿಂದ ಸ್ವರ್ಗ ಮರ್ತ್ಯಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ.


ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತುಹೋಗಿರುವವಾದದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಮೇಲೆ ಆಣೆಯಿಡುವನು.


ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು; ಆತನನ್ನೇ ಸೇವಿಸಬೇಕು; ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ಯಾಕೋಬ್ಯರ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ


ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು.


ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ ದೇವರ ಉತ್ತರವೇನಂದರೆ - ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ ಎಂಬದೇ.


ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯುವದಾಗಿ ಆಣೆಯಿಟ್ಟು ಪ್ರಮಾಣಮಾಡಿದರು. ಹೇಗಂದರೆ -


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ಅಬ್ರಹಾಮ ನಾಹೋರರ ದೇವರು ಅಂದರೆ ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದನು. ಅದೇ ಮೇರೆಗೆ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.


ಬೊಚ್ರವು ಹಾಳುಬಿದ್ದು ಬೆರಗಿಗೂ ನಿಂದೆಗೂ ಶಾಪಕ್ಕೂ ಗುರಿಯಾಗಿ ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶನವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.


ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ. ಇದು ಯೆಹೋವನ ನುಡಿ.


ಸೇನಾಧೀಶ್ವರದೇವರಾದ ಯೆಹೋವನ ನುಡಿಯನ್ನು ಕೇಳಿರಿ - ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗಂದಿದ್ದಾನೆ - ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು ಅದರ ಸೌಧಗಳನ್ನು ಹಗೆಮಾಡುತ್ತೇನೆ; ಆದದರಿಂದ ನಾನು ರಾಜಧಾನಿಯನ್ನೂ ಅದರ ಸಕಲಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು,


ಇಸ್ರಾಯೇಲೆಂಬ ಹೆಸರಿನವರೂ ಯೆಹೂದವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ, ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ ಧರ್ಮಕ್ಕೂ ಅನುಸಾರವಾಗಿಲ್ಲ.


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವಂತೆ ನೀನು ಇವರನ್ನು ಕಟ್ಟಿಕೊಳ್ಳುವಿ.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.


ಯೆಹೋವನು ತನ್ನ ಬಲಗೈ ಮೇಲೆ, ತನ್ನ ಭುಜಬಲದ ಮೇಲೆ, ಆಣೆಯಿಟ್ಟು - ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡಲೇ ಕೊಡೆನು. ನೀನು ದುಡಿದ ದ್ರಾಕ್ಷಾರಸವನ್ನು ಅನ್ಯರು ಕುಡಿಯುವದೇ ಇಲ್ಲ;


ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.


ಬಿಲ್ಲುಗಾರರಲ್ಲಿ ಉಳಿದವರೂ ಕೇದಾರಿನವರ ಶೂರರೂ ವಿರಳರಾಗುವರು; ಇಸ್ರಾಯೇಲ್ಯರ ದೇವರಾದ ಯೆಹೋವನು ಇದನ್ನು ನುಡಿದಿದ್ದಾನೆ ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು