Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:24 - ಕನ್ನಡ ಸತ್ಯವೇದವು J.V. (BSI)

24 ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:24
40 ತಿಳಿವುಗಳ ಹೋಲಿಕೆ  

ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನ ಹೊಂದುವರು; ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು;


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ಆದರೆ ನಾನು ಭೂವಿುಯಲ್ಲಿಂದ ಮೇಲಕ್ಕೆ ಎತ್ತಲ್ಪಟ್ಟಾಗ ಎಲ್ಲರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಎಂದು ಹೇಳಿದನು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಆತನ ಮಹಿಮಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷ್ಠರಾಗಿ ಆನಂದಪೂರ್ವಕವಾದ ತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಯಾವಾಗಲೂ ತೋರಿಸುವವರಾಗಿರಬೇಕೆಂತಲೂ


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಆ ಜಾತ್ರೆಯ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು - ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ನಾಚಿಕೊಂಡರು; ಗುಂಪುಕೂಡಿದ್ದ ಜನರೆಲ್ಲಾ ಆತನಿಂದಾಗುತ್ತಿದ್ದ ಎಲ್ಲಾ ಮಹತ್ವದ ಕಾರ್ಯಗಳಿಗೆ ಸಂತೋಷಪಟ್ಟರು.


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟದ್ದು ಇಲ್ಲದಂತಾಗುವದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸುವೆನು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇವಿುನವರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವದು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.


ಯೆಹೋವನಲ್ಲಿ ಸದಾ ಭರವಸವಿಡಿರಿ; ಯಾಹುಯೆಹೋವನು ಶಾಶ್ವತವಾಗಿ ಆಶ್ರಯಗಿರಿಯಾಗಿದ್ದಾನೆ.


ಯೆಹೋವನು ನಿನ್ನ ರಾಜದಂಡದ ಆಳಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನಮಾಡು.


ಅರಣ್ಯವಾಸಿಗಳು ಅವನಿಗೆ ಅಡ್ಡ ಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.


ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕುಮಾಡಿ ನನ್ನ ಉನ್ನತಪ್ರದೇಶಗಳಲ್ಲಿ ನನ್ನನ್ನು ನಡಿಸುತ್ತಾನೆ. ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.


ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.


ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣಾಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವದು.


ಆಗ ಯೆಹೂದದ ಕುಲಪತಿಗಳು ಮನಸ್ಸಿನೊಳಗೆ - ಯೆರೂಸಲೇವಿುನವರು ತಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ ಅಂದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು