ಯೆಶಾಯ 45:9 - ಕನ್ನಡ ಸತ್ಯವೇದವು J.V. (BSI)9 ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣು ಮಡಕೆಗಳಲ್ಲಿ ಅವನೂ ಒಂದು ಮಡಕೆಯಲ್ಲವೆ. ಮಣ್ಣು - ಏನು ಮಾಡುತ್ತೀ ಎಂದು ರೂಪಿಸುವವನನ್ನು ಕೇಳುವದುಂಟೇ? ನಿನ್ನ ಕಾರ್ಯವು [ನಿನ್ನ ವಿಷಯವಾಗಿ] ಅವನಿಗೆ ಕೈಯಿಲ್ಲ ಅಂದೀತೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ? ಅಧ್ಯಾಯವನ್ನು ನೋಡಿ |