ಯೆಶಾಯ 46:10 - ಕನ್ನಡ ಸತ್ಯವೇದವು J.V. (BSI)10 ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ. ಅಧ್ಯಾಯವನ್ನು ನೋಡಿ |