Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:12 - ಕನ್ನಡ ಸತ್ಯವೇದವು J.V. (BSI)

12 ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಧರ್ಮಕ್ಕೆ ದೂರವಾದ ಹಟಮಾರಿಗಳೇ, ಕಿವಿಗೊಡಿರಿ ನೀವು ನನ್ನ ಮಾತಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಿಮ್ಮಲ್ಲಿ ಕೆಲವರು ತಾವು ಬಲಿಷ್ಠರೆಂದು ತಿಳಿದುಕೊಂಡಿದ್ದಾರೆ; ಆದರೆ ನೀವು ಯಾವ ಒಳ್ಳೆಯ ಕಾರ್ಯಗಳನ್ನು ಮಾಡುವದಿಲ್ಲ. ನನ್ನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:12
26 ತಿಳಿವುಗಳ ಹೋಲಿಕೆ  

ಯೆಹೋವನು ಹೀಗನ್ನುತ್ತಾನೆ, ನಿಮ್ಮ ಪಿತೃಗಳು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡದರಿಂದ ವ್ಯರ್ಥಾಚಾರವನ್ನು ಅನುಸರಿಸಿ ತಾವೇ ವ್ಯರ್ಥರಾಗಿ ನನ್ನನ್ನು ಬಿಟ್ಟು ದೂರವಾದರು?


ಯಾಕೋಬವಂಶವೇ, ಇಸ್ರಾಯೇಲ್ ಸಂತಾನಶೇಷವೇ, ನನ್ನ ಮಾತಿಗೆ ಕಿವಿಗೊಡಿರಿ; ನಿಮ್ಮನ್ನು ಗರ್ಭದಿಂದ ಹೊರುತ್ತಿದ್ದೇನೆ, ಹುಟ್ಟಿದಂದಿನಿಂದ ವಹಿಸುತ್ತಿದ್ದೇನೆ;


ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು ನನ್ನ ಸಮೀಪಕ್ಕೆ ಬಂದಿದ್ದಾರೆ.


ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ;


ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.


ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆಗೈದಿದ್ದಾರೆ; ಎಲ್ಲಾ ಶೂರರ ಕೈ ನಿಂತುಹೋದವು.


ಸಕಲ ದೇಶಗಳವರೇ, ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕಿವಿಗೊಡಿರಿ.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಇಸ್ರಾಯೇಲೆಂಬ ಹೆಸರಿನವರೂ ಯೆಹೂದವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ, ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ ಧರ್ಮಕ್ಕೂ ಅನುಸಾರವಾಗಿಲ್ಲ.


ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.


ಇಟ್ಟಿಗೆಗಳು ಬಿದ್ದುಹೋದವು, ಹೋಗಲಿ, ಕೆತ್ತಿದ ಕಲ್ಲಿನಿಂದ ಕಟ್ಟುವೆವು; ಅತ್ತಿಮರಗಳು ಕಡಿಯಲ್ಪಟ್ಟವು, ಇರಲಿ,


ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ಆದಕಾರಣ ಯೆರೂಸಲೇವಿುನ ಈ ಜನರನ್ನಾಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.


ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ,


ಕೇಡನ್ನು ನನ್ನ ಕಣ್ಣಿಗೆ ಏಕೆ ಬೀಳಿಸುತ್ತಿದ್ದೀ? ಕಷ್ಟವನ್ನೇಕೆ ನನಗೆ ತೋರಿಸುತ್ತಿದ್ದೀ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ, ವ್ಯಾಜ್ಯವೇಳುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು