Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:13 - ಕನ್ನಡ ಸತ್ಯವೇದವು J.V. (BSI)

13 ನನ್ನ ಧರ್ಮವನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು; ಚೀಯೋನಿನಲ್ಲಿ ರಕ್ಷಣಾಕಾರ್ಯವನ್ನು ನಡಿಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:13
34 ತಿಳಿವುಗಳ ಹೋಲಿಕೆ  

ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನೊಂದಿಗಿದೆ, ಆತನು ಅನುಗ್ರಹಿಸುವ ಪ್ರತಿಫಲವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ ಎಂಬದಾಗಿ ಯೆಹೋವನು ಭೂವಿುಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.


ನನ್ನ ರಕ್ಷಣಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವದು; ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆಯಲ್ಪಟ್ಟದ್ದು, ಮಾನ್ಯವಾದದ್ದು; ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ ಎಂದು ಶಾಸ್ತ್ರದಲ್ಲಿ ಬರೆದದೆ.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ಹೀಗೆ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಯಾಗಿ ನಿಮ್ಮ ದೇವರಾದ ಯೆಹೋವನಾಗಿದ್ದೇನೆ ಎಂದು ನಿಮಗೆ ದೃಢವಾಗುವದು; ಆಗ ಯೆರೂಸಲೇಮು ಪವಿತ್ರವಾಗಿರುವದು; ಮ್ಲೇಚ್ಫರು ಇನ್ನು ಅದನ್ನು ಹಾದುಹೋಗರು.


ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.


ಬರುವಾತನು ಇನ್ನು ಸ್ಪಲ್ಪಕಾಲದಲ್ಲಿ ಬರುವನು, ತಡಮಾಡುವದಿಲ್ಲ;


ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದ ನಿಮ್ಮ ಮೂಲಕ ನಮ್ಮ ಕರ್ತನಾದ ಯೇಸುವಿನ ಹೆಸರಿಗೆ ಮಹಿಮೆ ಉಂಟಾಗುವದು; ಆತನ ಮೂಲಕ ನಿಮಗೂ ಮಹಿಮೆ ಉಂಟಾಗುವದು.


ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.


ನನ್ನದೆಲ್ಲಾ ನಿನ್ನದೇ, ನಿನ್ನದೆಲ್ಲಾ ನನ್ನದೇ; ಮತ್ತು ಇವರಿಂದ ನನಗೆ ಮಹಿಮೆ ಉಂಟಾಗಿದೆ.


ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು; ಇದು ಯೆಹೋವನ ನುಡಿ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು.


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವದು.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನು ಹೀಗನ್ನುತ್ತಾನೆ - ನ್ಯಾಯವನ್ನು ಅನುಸರಿಸಿರಿ, ಧರ್ಮವನ್ನು ಆಚರಿಸಿರಿ; ಏಕಂದರೆ ನನ್ನ ವಿಮೋಚನ ಕ್ರಿಯೆಯು ಬೇಗನೆ ಬರುವದು, ನನ್ನ ರಕ್ಷಣಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವದು.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.


ನಾನು ಯೆಹೋವನಿಗೆ ಪಾಪಮಾಡಿದ್ದರಿಂದ ಆತನ ರೋಷವನ್ನು ತಾಳಿಕೊಂಡಿರುವೆನು; ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ ನನಗೆ ನ್ಯಾಯವನ್ನು ತೀರಿಸುವನು; ನನ್ನನ್ನು ಬೆಳಕಿಗೆ ತರುವನು, ಆತನ ರಕ್ಷಣಧರ್ಮವನ್ನು ನೋಡುವೆನು.


ಕೃಪೆಯೂ ಸತ್ಯವೂ ಒಂದನ್ನೊಂದು ಕೂಡಿರುವವು; ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುವವು.


ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ವರ್ಷಿಸು, ಗಗನವು ಸುರಿಸಲಿ; ಭೂವಿುಯು ಒಡೆದು ರಕ್ಷಣೆಯನ್ನು ಮೊಳೆಯಿಸಿ ಅದರೊಡನೆ ನೀತಿಫಲವನ್ನು ಬೆಳೆಯಿಸಲಿ, ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು