Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:9 - ಕನ್ನಡ ಸತ್ಯವೇದವು J.V. (BSI)

9 ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:9
28 ತಿಳಿವುಗಳ ಹೋಲಿಕೆ  

ಇಗೋ, ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇವೆ; ಅವು ತಲೆದೋರುವದಕ್ಕೆ ಮುಂಚೆ ಅವುಗಳನ್ನು ನಿಮಗೆ ತಿಳಿಸುತ್ತೇನೆ.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ದಯೆಯೂ ಕನಿಕರವೂ ಉಳ್ಳವನು.


ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, ಇಬ್ಬರೂ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡೀರಿ?


ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ಪೂರ್ವಿಕರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು; ಹೇಗಂದರೆ -


ಯೆಶುರೂನೇ, ನಿಮ್ಮ ದೇವರಿಗೆ ಸಮಾನನು ಯಾವನೂ ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.


ಇಗೋ, ನೂತನಾಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆಬಾರದು.


ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.


ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲಕಾರಣನು; ನಾವು ಆತನಿಗಾಗಿ ಉಂಟಾದೆವು. ಮತ್ತು ನಮಗೆ ಒಬ್ಬನೇ ಕರ್ತ; ಆತನು ಯೇಸು ಕ್ರಿಸ್ತನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು, ನಾವೂ ಆತನ ಮುಖಾಂತರ ಉಂಟಾದೆವು.


ಅದಕ್ಕೆ ಮೋಶೆ - ನಿನ್ನ ಮಾತಿನ ಪ್ರಕಾರವೇ ಆಗುವದು;


ಈ ಸಾರಿ ನಾನು ನನ್ನ ವಶದಲ್ಲಿರುವ ಈತಿಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಅದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳುಕೊಳ್ಳುವಿ.


ಕಾರ್ಯವು ನಡೆಯುವದಕ್ಕೆ ಮುಂಚೆ [ಇವರಲ್ಲಿ] ಯಾವನು ಅದನ್ನು ಅರುಹಿದ್ದಾನೆ? ಅರುಹಿದ್ದರೆ [ಅವನು ನಿಜ ದೇವರೆಂದು] ನಮಗೆ ಗೊತ್ತಾಗುವದು; ಯಾವನು ಮುಂತಿಳಿಸಿದ್ದಾನೆ? ತಿಳಿಸಿದ್ದರೆ ಅವನನ್ನು ಸತ್ಯವಂತನೆನ್ನುವೆವು. ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವದಿಲ್ಲ.


ಇಗೋ ನೋಡು ಎನ್ನುವ ಮುಂದೂತನನ್ನು ಚೀಯೋನಿಗೆ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇವಿುಗೆ, ಅನುಗ್ರಹಿಸುವೆನು.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದೀ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು.


ಯೆಹೋವನ ಮಾತೇನಂದರೆ - ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು; ನೀವು ನನ್ನನ್ನು ತಿಳಿದು ನಂಬಿ ನನ್ನನ್ನೇ ಪರಮಾತ್ಮನು ಎಂದು ಗ್ರಹಿಸುವ ಹಾಗೆ [ಇದನ್ನು ನಡಿಸಿದೆನು]; ನನಗಿಂತ ಮುಂಚೆ ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವದಿಲ್ಲ.


ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು, ಹೌದು, ನನ್ನ ಬಾಯಿಂದ ಹೊರಟವು, ಪ್ರಕಟಿಸಿದೆನು; ನಾನು ತಟ್ಟನೆ ನಡಿಸಲು ನೆರವೇರಿದವು.


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿದ್ದೇನೆಂತಲೂ ಅದ್ವಿತೀಯನಾದ ನಾನೇ ನಿಮ್ಮ ದೇವರಾದ ಯೆಹೋವನಾಗಿದ್ದೇನೆಂತಲೂ ನಿಮಗೆ ನಿಶ್ಚಯವಾಗುವದು; ನನ್ನ ಜನರು ಎಂದಿಗೂ ಆಶಾಭಂಗಪಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು