Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:15 - ಕನ್ನಡ ಸತ್ಯವೇದವು J.V. (BSI)

15 ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರಮಾಡಿದವರೆಲ್ಲರೂ ಚದರಿ ತಮ್ಮ ತಮ್ಮ ಪ್ರಾಂತಕ್ಕೆ ಹೋಗಿಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಂತಾಗುವುದು ನೀ ಗೈದ ಪ್ರಯತ್ನಗಳೆಲ್ಲ. ಬಾಲ್ಯದಿಂದ ನಿನ್ನೊಡನೆ ವ್ಯವಹರಿಸಿದವರು ಸರಿವರು ದೂರಕೆ ಹಿಂದಿರುಗುವರೆಲ್ಲರು ತಂತಮ್ಮ ನಾಡಿಗೆ ಅಂತ್ಯದಲಿ ಯಾರೂ ಆಗರು ರಕ್ಷಣೆ ನಿನಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀನು ಕಷ್ಟಪಟ್ಟು ಗಳಿಸಿದ ಸಂಪತ್ತಿಗೆಲ್ಲಾ ಹಾಗೆಯೇ ಆಗುವದು. ನಿನ್ನ ಜೀವಮಾನ ಕಾಲವೆಲ್ಲಾ ವ್ಯವಹಾರ ನಡಿಸಿದ್ದ ಜನರೆಲ್ಲಾ ನಿನ್ನನ್ನು ತೊರೆದುಬಿಡುವರು. ಪ್ರತಿಯೊಬ್ಬನು ತನ್ನ ಸ್ವಂತದಾರಿ ಹಿಡಿಯುವನು. ಆಗ ನಿನ್ನನ್ನು ರಕ್ಷಿಸಲು ಯಾರೂ ಇರುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವುವು. ನಿನ್ನ ಬಾಲ್ಯ ಪ್ರಾಯದಿಂದ ನಿನ್ನ ವರ್ತಕರು ಚದರಿ, ತಮ್ಮ ತಮ್ಮ ಪ್ರಾಂತಕ್ಕೆ ಹೋಗಿ ಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:15
8 ತಿಳಿವುಗಳ ಹೋಲಿಕೆ  

ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಸಿಂಹದಂತೆ ಗರ್ಜಿಸುತ್ತಾರೆ, ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ, ಗುರುಗುಟ್ಟುತ್ತಾ ಬೇಟೆಹಿಡಿದು ಹೊತ್ತುಕೊಂಡು ಹೋಗುತ್ತಾರೆ, ರಕ್ಷಿಸುವವರು ಯಾರೂ ಇಲ್ಲ.


ಹೌದು, ಇಂದಿನಿಂದ ನಾನೇ ಪರಮಾತ್ಮನು; ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಯಾರು ಅಡ್ಡಬಂದಾರು? ಎಂಬದೇ ಯೆಹೋವನ ಮಾತು.


ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರಗದು, ಒಬ್ಬನು ಕೂಗಿಕೊಂಡರೂ ಉತ್ತರಕೊಟ್ಟು ಕಷ್ಟದಿಂದ ಅವನನ್ನು ಬಿಡಿಸಲಾರದು.


ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ; ಖಗೋಲಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು