ಯೆಶಾಯ 47:5 - ಕನ್ನಡ ಸತ್ಯವೇದವು J.V. (BSI)5 ಕಸ್ದೀಯರ ನಗರಿಯೇ, ಮೌನವಾಗಿ ಕೂತುಕೋ, ಕತ್ತಲೊಳಗೆ ಹೊಗು, ನೀನು ಇನ್ನು ರಾಜ್ಯಗಳ ರಾಣಿ ಎನಿಸಿಕೊಳ್ಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಕಸ್ದೀಯ ನಗರಿಯೇ, ಕುಳಿತುಕೊ ಮೌನವಾಗಿ ಕತ್ತಲೆಯೊಳಗೆ ಇನ್ನು ಎನಿಸಿಕೊಳ್ಳೆ ರಾಣಿಯೆಂದು ರಾಜ್ಯಗಳಿಗೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಆದ್ದರಿಂದ ಬಾಬಿಲೋನೇ, ಅಲ್ಲಿ ಸುಮ್ಮನೆ ಕುಳಿತಿರು. ಕಸ್ದೀಯರ ಕುಮಾರಿಯೇ ಕತ್ತಲೆಯೊಳಗೆ ಹೋಗಿ ಇರು, ಯಾಕೆಂದರೆ ನೀನು ‘ಜನಾಂಗಗಳ ರಾಣಿ’ ಎಂದು ಇನ್ನು ಮುಂದೆ ಕರೆಯಲ್ಪಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕಸ್ದೀಯರ ಪುತ್ರಿಯೇ, “ಮೌನವಾಗಿ ಕುಳಿತುಕೋ, ಕತ್ತಲೆಯೊಳಗೆ ಹೋಗು. ಏಕೆಂದರೆ ಇನ್ನು ಮೇಲೆ ನಿನ್ನನ್ನು ರಾಜ್ಯಗಳ ರಾಣಿ ಎಂದು ಕರೆಯುವುದಿಲ್ಲ. ಅಧ್ಯಾಯವನ್ನು ನೋಡಿ |