Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:8 - ಕನ್ನಡ ಸತ್ಯವೇದವು J.V. (BSI)

8 ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕೂತುಕೊಳ್ಳುವದಿಲ್ಲ, ಪುತ್ರಶೋಕವನ್ನು ಅನುಭವಿಸುವದಿಲ್ಲ ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ‘ಕೋಮಲ ಸ್ತ್ರೀಯೇ,’ ನನ್ನ ಮಾತನ್ನು ಕೇಳು. ಸುರಕ್ಷಿತಳಾಗಿರುವೆ ಎಂದು ನೆನಸಿಕೊಂಡು ಹೀಗೆ ನಿನ್ನೊಳಗೆ, ‘ನಾನೇ ಮಹಾವ್ಯಕ್ತಿ. ನನ್ನಂಥ ಮಹಾವ್ಯಕ್ತಿ ಯಾರೂ ಇಲ್ಲ. ನಾನೆಂದಿಗೂ ವಿಧವೆಯಾಗುವದಿಲ್ಲ. ಯಾವಾಗಲೂ ನನಗೆ ಮಕ್ಕಳಿರುವರು’ ಎಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ. ‘ನಾನು ವಿಧವೆಯಾಗಿ ಕೂತುಕೊಳ್ಳುವುದಿಲ್ಲ. ಪುತ್ರ ಶೋಕವನ್ನು ಅನುಭವಿಸುವುದಿಲ್ಲ,’ ಎನ್ನುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:8
36 ತಿಳಿವುಗಳ ಹೋಲಿಕೆ  

ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.


ನಿಶ್ಚಿಂತೆಯ ಹೆಂಗಸರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ; ಭಯವಿಲ್ಲದ ಹೆಣ್ಣುಗಳಿರಾ, ನನ್ನ ಮಾತಿಗೆ ಕಿವಿಗೊಡಿರಿ!


ನನ್ನ ಸ್ವಾಸ್ತ್ಯವನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವದರಿಂದ


ನೀನು ಮಾಡಿದ ಕೇಡಿಗೆ ಭಯಪಡದೆ ನನ್ನನ್ನು ಯಾರೂ ನೋಡರು ಎಂದುಕೊಂಡಿದ್ದೀ; ನಿನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲವೆಂದು ಯೋಚಿಸಿಕೊಂಡಿದ್ದೀ.


ಮೂಡಲಿಂದ ಪಡುವಲ ತನಕ ಇರುವವರೆಲ್ಲರೂ ಇದನ್ನು ನೋಡಿ ನನ್ನ ವಿನಹ ಯಾರೂ ಇಲ್ಲ, ನಾನೇ ಯೆಹೋವನು,


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ಬಾಬೆಲು ಆಕಾಶದ ತನಕ ಬೆಳೆದು ಎತ್ತರವಾಗಿಯೂ ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು. ಇದು ಯೆಹೋವನ ನುಡಿ.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.


ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು ಅವರನ್ನು ಕತ್ತಿಯಿಂದ ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟರು.


ಆ ಐದು ಮಂದಿ ಹೊರಟು ಲಯಿಷಿಗೆ ಬಂದು - ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ತಗ್ಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬದನ್ನು ತಿಳಿದುಕೊಂಡು


ಉನ್ನತ ಮೇಘಮಂಡಲದ ಮೇಲೆ ಏರಿ ಉನ್ನತೋನ್ನತನಿಗೆ ಸರಿಸಮಾನನಾಗುವೆನು ಅಂದುಕೊಂಡಿದ್ದೆಯಲ್ಲಾ!


ನಿಶ್ಚಿಂತೆಯವರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ ಬೆತ್ತಲೆಯಾಗಿ ಸೊಂಟಕ್ಕೆ [ಗೋಣಿತಟ್ಟನ್ನು] ಸುತ್ತಿಕೊಳ್ಳಿರಿ.


ನಾನೇ ಯೆಹೋವ, ಇನ್ನು ಯಾವನೂ ಅಲ್ಲ, ನಾನು ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.


[ಬಾಬೆಲಿನವರೇ,] ಏಳಿರಿ. ಅಗುಳಿಯೂ ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಜನಾಂಗದ ಮೇಲೆ ಬೀಳಿರಿ!


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶನದಿನದಲ್ಲಿ ಕೂಷ್ಯರಿಗೂ ಸಂಕಟವಾಗುವದು; ಇಗೋ ಬಂತು.


ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸೊಂಪಾಗಿದ್ದೆನು.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.


ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ಅತಿಸುಂದರಿಯೂ ಮಂತ್ರತಂತ್ರನಿಪುಣಳೂ ಜನಾಂಗಗಳನ್ನು ತನ್ನ ಸೂಳೆತನದಿಂದ, ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ಸೂಳೆಯ ಲೆಕ್ಕವಿಲ್ಲದ ಸೂಳೆತನಗಳ ನಿವಿುತ್ತ ಇದೆಲ್ಲಾ ಆಗುವದು.


ಅವರು ಕ್ರೂರರು, ಭಯಂಕರರು; ಅವರ ಅಧಿಕಾರವೂ ಗೌರವವೂ ಅವರಿಂದಲೇ ಹೊರಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು