Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:14 - ಕನ್ನಡ ಸತ್ಯವೇದವು J.V. (BSI)

14 ನೀವೆಲ್ಲರು ಕೂಡಿಕೊಂಡು ಕೇಳಿರಿ! ಇವರಲ್ಲಿನ ಯಾವ ದೇವರು ಈ ಸಂಗತಿಗಳನ್ನು ಅರುಹಿದ್ದಾನೆ? ಯೆಹೋವನ ಪ್ರೀತಿಪಾತ್ರನು ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು, ಕಸ್ದೀಯರ ಮೇಲೆ ಕೈಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು : ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೀವೆಲ್ಲರೂ ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿರಿ. ಸುಳ್ಳುದೇವರುಗಳಲ್ಲಿ ಯಾರಾದರೂ ಈ ವಿಷಯಗಳು ಸಂಭವಿಸುತ್ತವೆಯೆಂದು ಹೇಳಿರುವರೇ? ಇಲ್ಲ!” ಯೆಹೋವನು ಆರಿಸಿದ ಮನುಷ್ಯನು ಬಾಬಿಲೋನಿಗೂ ಕಸ್ದೀಯರಿಗೂ ತನ್ನ ಇಷ್ಟಬಂದ ಹಾಗೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಯೆಹೋವ ದೇವರು ಆಯ್ಕೆ ಮಾಡಿದ ಮಿತ್ರನು ಬಾಬಿಲೋನಿನ ವಿರುದ್ಧ ತನ್ನ ಉದ್ದೇಶವನ್ನು ಪೂರೈಸುತ್ತಾನೆ. ತನ್ನ ತೋಳು ಕಸ್ದೀಯರ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:14
17 ತಿಳಿವುಗಳ ಹೋಲಿಕೆ  

ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು [ಇವರ ಮಾತನ್ನು] ಕೇಳಿ ನಿಜವೆಂದು ಹೇಳಲಿ.


ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಗ್ರಹಿಸುವೆವು; ಅಥವಾ ಭವಿಷ್ಯತ್ತುಗಳನ್ನು ಅರುಹಿರಿ.


ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.


ನಾನು ಪುರಾತನದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ; ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.


ಯೇಸು ಅವನನ್ನು ದೃಷ್ಟಿಸಿನೋಡಿ ಪ್ರೀತಿಸಿ ಅವನಿಗೆ - ನಿನಗೆ ಒಂದು ಕಡಿಮೆಯಾಗಿದೆ; ಹೋಗು, ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ರಾಜ್ಯಗಳಿಗೆ ಶಿರೋರತ್ನವೂ ಕಸ್ದೀಯರ ಮಹಿಮೆಗೆ ಭೂಷಣವೂ ಆದ ಬಾಬೆಲಿಗೆ ದೇವರು ಕೆಡವಿದ ಸೊದೋಮ್ ಗೊಮೋರಗಳ ಗತಿಯು ಸಂಭವಿಸುವದು.


ಇಗೋ, ಸವಾರರು, ಜೋಡಿ ಜೋಡಿಯಾಗಿ ಬರುತ್ತಾರೆ ಎಂದು ಕೂಗಿ ಇನ್ನೂ ಹೇಳಿದ್ದೇನಂದರೆ - ಬಾಬೆಲ್ ಬಿತ್ತು, ಬಿತ್ತು! ಅದರ ದೇವತಾವಿಗ್ರಹಗಳನ್ನು ಒಡೆದು ನೆಲಸಮಮಾಡಿಬಿಟ್ಟರು ಎಂಬದೇ.


ಯಾಕೋಬನು ತನ್ನ ಮಕ್ಕಳನ್ನು ಕರಸಿ - ನೀವೆಲ್ಲರೂ ಕೂ ಡಿಬನ್ನಿರಿ; ಮುಂದಿನ ಕಾಲದಲ್ಲಿ ನಿಮಗೆ ಸಂಭವಿಸುವದನ್ನು ತಿಳಿಸುತ್ತೇನೆ.


ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿಬಂದು ಕೇಳಿರಿ; ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ.


ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇವಿುಸಿದ್ದೇನೆ, ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು; ಅವನು ನನ್ನ ಪಟ್ಟಣವನ್ನು ತಿರಿಗಿ ಕಟ್ಟಿ ಕ್ರಯವನ್ನಾಗಲಿ ಬಹುಮಾನವನ್ನಾಗಲಿ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವನು ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು