ಯೆಶಾಯ 48:16 - ಕನ್ನಡ ಸತ್ಯವೇದವು J.V. (BSI)16 ನನ್ನ ಬಳಿಗೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, [ಭೂವಿುಯು] ಉಂಟಾದಂದಿನಿಂದ ಅಲ್ಲಿ ಇದ್ದೇನೆ. (ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ). ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನ ಬಳಿಗೆ ಬಂದು ನನ್ನ ಮಾತು ಕೇಳಿರಿ! ಬಾಬಿಲೋನ್ ಒಂದು ದೇಶವಾಗಿ ಪರಿಣಮಿಸುವಾಗ ನಾನು ಅಲ್ಲಿದ್ದೆನು. ಆದಿಯಿಂದಲೇ ನಾನು ಸ್ವಷ್ಟವಾಗಿ ಹೇಳಿದ್ದೇನೆ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದೇನೆ.” ಯೆಶಾಯನು ಹೇಳಿದ್ದೇನೆಂದರೆ: “ಈಗ ನನ್ನ ಒಡೆಯನಾದ ಯೆಹೋವನೂ ಆತನ ಆತ್ಮನೂ ಈ ವಿಷಯಗಳನ್ನು ತಿಳಿಸಲು ನನ್ನನ್ನು ಕಳುಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನನ್ನ ಸಮೀಪಕ್ಕೆ ಬಂದು ಇದನ್ನು ಕೇಳಿರಿ. “ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ಅಲ್ಲಿ ನಾನು ಇದ್ದೇನೆ.” ಈಗ ಸಾರ್ವಭೌಮ ಯೆಹೋವ ದೇವರು ತಮ್ಮ ಪವಿತ್ರಾತ್ಮರ ಸಮೇತ ನನ್ನನ್ನು ಕಳುಹಿಸಿದ್ದಾರೆ. ಅಧ್ಯಾಯವನ್ನು ನೋಡಿ |