Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:2 - ಕನ್ನಡ ಸತ್ಯವೇದವು J.V. (BSI)

2 ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಅಧೀಶ್ವರನಾದ ಯೆಹೋವನೆಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:2
25 ತಿಳಿವುಗಳ ಹೋಲಿಕೆ  

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ನೀನು ಯೆಹೂದ್ಯನೆನಿಸಿಕೊಂಡವನೂ ಧರ್ಮಶಾಸ್ತ್ರದಲ್ಲಿ ಭರವಸವಿಟ್ಟವನೂ ದೇವರ ವಿಷಯವಾಗಿ ಹೊಗಳಿಕೊಳ್ಳುವವನೂ


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು.


ಮತ್ತು ಆತನು ಎದ್ದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.


ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನಲ್ಲಾ; ಒಂದುವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.


ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.


ಇದಲ್ಲದೆ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ಪರಲೋಕದಿಂದ ದೇವರ ಬಳಿಯಿಂದ ಇಳಿದುಬರುವದನ್ನು ಕಂಡೆನು; ಅದು ತನ್ನ ಗಂಡನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ಆಗ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರಕೊಂಡು ಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ -


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.


ಆಕಾಶಮಂಡಲವನ್ನು ಹರಡಿ ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟಿಯಾ? ನಾಶಮಾಡಬೇಕೆಂದು [ಬಾಣವನ್ನು] ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ತಾನೇ ಇದೆ?


ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲ್ಯರ ಸದಮಲಸ್ವಾವಿು!


ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನಂದರೆ - ಸೆಲಾ.


ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತನಗರದಲ್ಲಿ ಸರ್ವಸ್ತುತಿಪಾತ್ರನಾಗಿದ್ದಾನೆ.


ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಇನ್ನೂರೆಂಭತ್ತನಾಲ್ಕು ಮಂದಿ.


ಇಸ್ರಾಯೇಲ್ಯರ ಪ್ರಭುಗಳು ಮಾತ್ರ ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತತ್ತು ಮಂದಿಯಲ್ಲಿ ಒಂಭತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿದ್ದುಕೊಂಡು ಒಬ್ಬನು ಪವಿತ್ರನಗರವಾಗಿರುವ ಯೆರೂಸಲೇವಿುನಲ್ಲಿ ವಾಸಿಸುವದಕ್ಕಾಗಿ ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತು ಮಾಡಿದರು.


ಒಬ್ಬ ಲೇವಿಯು ತನ್ನ ಮನೆಯಲ್ಲಿ ಯಾಜಕನಾಗಿರುವದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು ಅಂದುಕೊಂಡನು.


ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ - ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನಿರನು ಎಂಬದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.


ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ; ಸೇನಾಧೀಶ್ವರನಾದ ಯೆಹೋವನೆಂಬದೇ ನನ್ನ ನಾಮಧೇಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು