ಯೆಶಾಯ 48:20 - ಕನ್ನಡ ಸತ್ಯವೇದವು J.V. (BSI)20 ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆಯಿಂದ ಹಾರಿಹೋಗಿರಿ; ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ, ಭೂವಿುಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ಹೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ". ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ. ಅಧ್ಯಾಯವನ್ನು ನೋಡಿ |