Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:21 - ಕನ್ನಡ ಸತ್ಯವೇದವು J.V. (BSI)

21 ಆತನು ಅವರನ್ನು ಮರುಭೂವಿುಯಲ್ಲಿ ನಡಿಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:21
15 ತಿಳಿವುಗಳ ಹೋಲಿಕೆ  

ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನ್ನೆದುರಾಗಿ ನಿಲ್ಲುವೆನು. ನೀನು ಆ ಬಂಡೆಯನ್ನು ಹೊಡೆದಾಗ ಅದರಿಂದ ನೀರು ಹೊರಡುವದು, ಜನರು ಕುಡಿಯುವರು ಎಂದು ಮೋಶೆಗೆ ಅಪ್ಪಣೆ ಕೊಡಲಾಗಿ ಮೋಶೆ ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಆತನು ಬಂಡೆಯನ್ನು ಸೀಳಲು ನೀರು ಚಿವ್ಮಿು ಬಂದು ಅರಣ್ಯದಲ್ಲಿ ನದಿಯಾಗಿ ಹರಿಯಿತು.


ಬುರುಜುಗಳು ಬಿದ್ದುಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.


ಬಂಡೆಯನ್ನು ಹೊಡೆದು ನೀರು ಚಿವ್ಮಿು ಹೊರಗೆ ಬರುವಂತೆಯೂ ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನೂ ಕೊಡಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ ಎಂಬದೇ.


ಕೈಯೆತ್ತಿ ತನ್ನ ಕೈಯಲ್ಲಿರುವ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು; ಸಮೂಹದವರೂ ಅವರ ಪಶುಗಳೂ ಕುಡಿದರು.


ಅವರಿಗೆ ಹಸಿವೆ ಬಾಯಾರಿಕೆಗಳು ಆಗವು. ಝಳವೂ ಬಿಸಿಲೂ ಬಡಿಯವು; ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರುಕ್ಕುವ ಒರತೆಗಳ ಬಳಿಯಲ್ಲಿ ನಡಿಸುವನು.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದಿ.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.


ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.


ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ ನದಿಗಳಾಗಿ ಹರಿಯಮಾಡಿದನು.


ಅವರಿಗೆ ಉಪದೇಶಿಸಲು ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು