Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:4 - ಕನ್ನಡ ಸತ್ಯವೇದವು J.V. (BSI)

4 ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ನೀನು ಹಟಗಾರ. ನಿನ್ನ ಕತ್ತಿನ ನರಗಳು ಕಬ್ಬಿಣ, ನಿನ್ನ ಹಣೆ ಕಂಚಿನದು ಎಂದು ನಾನು ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:4
27 ತಿಳಿವುಗಳ ಹೋಲಿಕೆ  

ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಅದಲ್ಲದೆ ಯೆಹೋವನು ಮೋಶೆಗೆ - ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ; ಇವರು ನನ್ನ ಆಜ್ಞೆಗೆ ಬೊಗ್ಗದವರಾಗಿದ್ದಾರೆ;


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದದ್ದೇನಂದರೆ - ನೀವು ನನ್ನ ಆಜ್ಞೆಗಳಿಗೆ ಬೊಗ್ಗದವರೇ. ನಾನು ಒಂದು ಕ್ಷಣಮಾತ್ರ ನಿಮ್ಮ ಮಧ್ಯದಲ್ಲಿ ಬರುವದಾದರೆ ನೀವು ನಿರ್ಮೂಲವಾಗಿ ಹೋದೀರಿ, ನೋಡಿಕೊಳ್ಳಿರಿ. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ ನಿಮಗೆ ನಾನು ಏನು ಮಾಡಬೇಕೆಂಬದನ್ನು ಆಲೋಚಿಸಿಕೊಳ್ಳುವೆನು ಅಂದನು.


ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿರಿ ಎಂದು ಹೇಳುವೆನು.


ಅದು ಹಾಲೂ ಜೇನೂ ಹರಿಯುವ ದೇಶವೇ. ಆದರೆ ನಾನೇ ನಿಮ್ಮ ಸಂಗಡ ಬರುವದಿಲ್ಲ; ನೀವು ನನ್ನ ಆಜ್ಞೆಗೆ ಬೊಗ್ಗದವರಾದ್ದರಿಂದ ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸೇನು ಅಂದನು.


ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;


ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.


ನಿಮ್ಮಲ್ಲಿ ಒಬ್ಬರಾದರೂ ಪಾಪದಿಂದ ಮೋಸಹೋಗಿ ಕಠಿನರಾಗದಂತೆ ಈಹೊತ್ತು ಎಂಬ ಕಾಲವು ಇರುವ ತನಕ ಪ್ರತಿನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ಸೂಳೆಯ ಮುಖವುಳ್ಳವಳಾಗಿ ನಾಚಿಕೆಗೆಟ್ಟಿದ್ದೀ.


ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.


ಅವರು ದೇವರಾದ ಯೆಹೋವನನ್ನು ನಂಬದೆ ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಆತನಿಗೆ ಕಿವಿಗೊಡದೆ ಹೋದರು;


ಆದದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಸ್ವಭಾವವನ್ನು ಬಿಟ್ಟುಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ.


ಉಪಶಮನವನ್ನು ಪಡೆದ ಮೇಲೆ ಅವರು ತಿರಿಗಿ ದ್ರೋಹಿಗಳಾಗಿ ನಡೆಯುತ್ತಿರುವದನ್ನು ನೀನು ಕಂಡು ಅವರ ಮೇಲೆ ದೊರೆತನ ನಡಿಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದಿ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿ -


ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿ.


ಫರೋಹನು ವಿಚಾರಿಸಿದಾಗ ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳುಕೊಂಡನು. ಆದಾಗ್ಯೂ ಫರೋಹನ ಹೃದಯವು ಮೊಂಡವಾಗಿದ್ದದರಿಂದ ಆ ಜನರಿಗೆ ಹೊರಡಲಿಕ್ಕೆ ಅಪ್ಪಣೆ ಕೊಡದೆಹೋದನು.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರಷ್ಟೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು