Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:5 - ಕನ್ನಡ ಸತ್ಯವೇದವು J.V. (BSI)

5 ಅದರಿಂದಲೇ ಈ ಕಾರ್ಯಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ಬೊಂಬೆ, ಎರಕದ ಪುತ್ತಳಿ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು, ನಡೆಯುವದಕ್ಕೆ ಮುಂಚೆಯೇ ಪ್ರಕಟಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ‘ಈ ಕಾರ್ಯಗಳನ್ನು ನಡೆಸಿದ್ದು ನನ್ನ ವಿಗ್ರಹವೇ ವಿಧಿಸಿದ್ದು ನನ್ನ ಕೆತ್ತನೆಯ ಬೊಂಬೆಯೇ, ಎರಕದ ಮೂರ್ತಿಯೇ’ ಎಂದು ನೀ ಜಂಬ ಕೊಚ್ಚಿಕೊಳ್ಳದಂತೆ ಪುರಾತನ ಕಾಲದಲ್ಲೆ ನಾನಿವುಗಳನು ಮುಂತಿಳಿಸಿದೆ. ಅವುಗಳು ನೆರವೇರುವುದಕ್ಕೆ ಮುಂಚೆಯೇ ಪ್ರಕಟಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಂಭವಿಸಲಿರುವ ಸಂಗತಿಗಳನ್ನು ಬಹುಕಾಲದ ಮೊದಲೇ ನಿಮಗೆ ತಿಳಿಸಿದ್ದೆನು. ಅವು ಸಂಭವಿಸುವದಕ್ಕಿಂತ ಎಷ್ಟೋ ಕಾಲದ ಮೊದಲೇ ತಿಳಿಸಿದೆನು. ನೀವು, ‘ಇವುಗಳನ್ನು ಮಾಡಿದ್ದು ನಮ್ಮ ವಿಗ್ರಹಗಳೇ, ನಮ್ಮ ಮರ ಮತ್ತು ಲೋಹದ ದೇವರುಗಳೇ ಅವುಗಳನ್ನು ಮಾಡಿದ್ದು ಎಂದು ನೀವು ಹೇಳದಂತೆ ಮಾಡಿದೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ‘ಈ ಕಾರ್ಯಗಳನ್ನು ನನ್ನ ವಿಗ್ರಹಗಳು ನಡಿಸಿದೆ. ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ,’ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ಇವು ಸಂಭವಿಸುವುದಕ್ಕಿಂತ ಮೊದಲೇ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:5
10 ತಿಳಿವುಗಳ ಹೋಲಿಕೆ  

ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು, ಹೌದು, ನನ್ನ ಬಾಯಿಂದ ಹೊರಟವು, ಪ್ರಕಟಿಸಿದೆನು; ನಾನು ತಟ್ಟನೆ ನಡಿಸಲು ನೆರವೇರಿದವು.


ಆದಿಯಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ ಎಂದು ಬರೆದದೆ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;


ನಾನು ಪುರಾತನದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ; ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.


ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.


ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು