Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:6 - ಕನ್ನಡ ಸತ್ಯವೇದವು J.V. (BSI)

6 [ಆಗಲೇ] ಕೇಳಿದಿಯಲ್ಲಾ, [ಈಗ] ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ, ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತ ವಿಷಯಗಳನ್ನು, ನಿನಗೆ ಅರುಹುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೋಡು, ನೀ ಕೇಳಿದವೆಲ್ಲ ನಡೆದಿದೆಯೊ ಇಲ್ಲವೋ ಎಂಬುದನು. ಆದರೂ ಘೋಷಿಸುತ್ತಾರೆಯೇ ನಿನ್ನವರು ಅವುಗಳನ್ನು? ಅರುಹುವೆನು ನಿನಗಿಂದಿನಿಂದ ಹೊಸ ಸಂಗತಿಗಳನು ಈವರೆಗೂ ನೀನರಿಯದ ಗುಪ್ತ ವಿಷಯಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನಡೆದದ್ದನ್ನು ನೀವು ಕಣ್ಣಾರೆ ನೋಡಿದಿರಿ; ಕಿವಿಯಾರೆ ಕೇಳಿದಿರಿ. ಆದ್ದರಿಂದ ನೀವು ಇತರರಿಗೆ ಸುದ್ದಿಯನ್ನು ತಿಳಿಸಬೇಕು. ನೀವು ಈವರೆಗೆ ತಿಳಿಯದಿರುವ ಗುಪ್ತವಿಷಯಗಳನ್ನು ಈಗ ನಿಮಗೆ ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀನು ಕೇಳಿದ್ದೀ, ಇವೆಲ್ಲವುಗಳನ್ನು ದೃಷ್ಟಿಸು. ನೀವು ಅದನ್ನು ಒಪ್ಪಿಕೊಳ್ಳದೆ ಇದ್ದೀರೋ? “ಇಂದಿನಿಂದ ಹೊಸ ಸಂಗತಿಗಳನ್ನೂ, ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನೂ ನಿನಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:6
29 ತಿಳಿವುಗಳ ಹೋಲಿಕೆ  

ಇವುಗಳಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ಮತ್ತು ನನ್ನ ಸಂಗಡ ತುತೂರಿಯು ಮಾತಾಡುತ್ತದೋ ಎಂಬಂತೆ ನಾನು ಮೊದಲು ಕೇಳಿದ್ದ ವಾಣಿಯು ಕೇಳಿಸಿತು. ಇಲ್ಲಿಗೆ ಏರಿ ಬಾ, ಮುಂದೆ ಆಗಬೇಕಾದವುಗಳನ್ನು ನಿನಗೆ ತೋರಿಸುವೆನು ಎಂದು ಹೇಳಿತು. ಕೂಡಲೆ ದೇವರಾತ್ಮವಶನಾದೆನು.


ಇಗೋ, ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇವೆ; ಅವು ತಲೆದೋರುವದಕ್ಕೆ ಮುಂಚೆ ಅವುಗಳನ್ನು ನಿಮಗೆ ತಿಳಿಸುತ್ತೇನೆ.


ನಾನು ಕತ್ತಲಲ್ಲಿ ನಿಮಗೆ ಹೇಳುವದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು.


ಆದರೆ ಬರೆದಿರುವ ಪ್ರಕಾರ - ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ.


ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ, ಇಸ್ರಾಯೇಲ್ಯರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.


ನನ್ನ ತುಟಿಗಳು ನಿನ್ನ ವಿಧಿವಚನಗಳನ್ನೆಲ್ಲಾ ವರ್ಣಿಸುತ್ತವೆ.


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


ಆದದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.


ಯೆಹೋವನು ದನಿಗೈದು ಪಟ್ಟಣದ ಕಡೆಗೆ ಕೂಗುತ್ತಾನೆ; (ನಿನ್ನ ನಾಮದಲ್ಲಿ ಭಯಭಕ್ತಿಯಿಡುವದು ಸುಜ್ಞಾನವೇ;) [ಬೀಸುವ] ದಂಡಕ್ಕೆ ಕಿವಿಗೊಡಿರಿ, ಅದನ್ನು ನೇವಿುಸಿದವನು ಯಾವನೆಂದು ತಿಳಿದುಕೊಳ್ಳಿರಿ.


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ; ಆಹಾ, ಮೊದಲೇ ನಾನು ತಿಳಿದುಕೊಂಡಿದ್ದೆನು ಎಂದು ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮುಂಚೆ ನಾನು ನಿನಗೆ ಕೇಳಗೊಡಿಸಲಿಲ್ಲ.


ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಇವನ ಕಿವಿ ತೆರೆದಿದ್ದರೂ ಕೇಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು