Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:7 - ಕನ್ನಡ ಸತ್ಯವೇದವು J.V. (BSI)

7 ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ; ಆಹಾ, ಮೊದಲೇ ನಾನು ತಿಳಿದುಕೊಂಡಿದ್ದೆನು ಎಂದು ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮುಂಚೆ ನಾನು ನಿನಗೆ ಕೇಳಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪುರಾತನ ಕಾಲದಲ್ಲಿ ಅಲ್ಲ, ಈಗ ನಡೆಯುತ್ತಿವೆ ಈ ಘಟನೆಗಳೆಲ್ಲ. ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತಲ್ಲಾ,’ ಎಂದು ನೀ ಕೊಚ್ಚಿಕೊಳ್ಳದಂತೆ, ನಾ ನಿನಗೆ ಮುಂತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇವು ಬಹಳ ಕಾಲದ ಹಿಂದೆ ನಡೆದ ವಿಷಯಗಳಲ್ಲ. ಇವು ಈಗ ಸಂಭವಿಸುವ ವಿಷಯಗಳು. ಈ ದಿವಸಕ್ಕೆ ಮೊದಲು ನೀವು ಇದನ್ನು ಕೇಳಲಿಲ್ಲ. ಆದ್ದರಿಂದ ‘ನಮಗೆ ಇದೆಲ್ಲಾ ಗೊತ್ತಿದೆ’ ಎಂದು ನೀವು ಹೇಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈಗಲೇ ಉಂಟಾಗುತ್ತಿವೆ, ಪುರಾತನ ಕಾಲದಲ್ಲಿ ಆಗಿಲ್ಲ; ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತು,’ ಎಂದು ನೀನು ಕೊಚ್ಚಿಕೊಳ್ಳದಂತೆ, ನಾನು ಇವುಗಳನ್ನು ನಿನಗೆ ಮುಂತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:7
4 ತಿಳಿವುಗಳ ಹೋಲಿಕೆ  

[ಆಗಲೇ] ಕೇಳಿದಿಯಲ್ಲಾ, [ಈಗ] ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ, ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತ ವಿಷಯಗಳನ್ನು, ನಿನಗೆ ಅರುಹುತ್ತೇನೆ.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನು, ಆಗರ್ಭದ್ರೋಹಿ ಎನಿಸಿಕೊಂಡವನು ಎಂದು ನಾನು ತಿಳಿದುಕೊಂಡಿದ್ದೆನಷ್ಟೆ.


ನಾವು [ಅವನಲ್ಲಿ] ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವದಿಲ್ಲ ಎಂದು ಅಂದುಕೊಳ್ಳಬೇಡಿರಿ;


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು