Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:1 - ಕನ್ನಡ ಸತ್ಯವೇದವು J.V. (BSI)

1 ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:1
34 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವದಕ್ಕೆ ಮುಂಚೆ ನಿನ್ನನ್ನು ತಿಳಿದಿದ್ದೆನು; ನೀನು ಉದರದಿಂದ ಬರುವದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು; ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇವಿುಸಿದ್ದೇನೆ.


ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ಕರೆದ ದೇವರು


ನಿನ್ನನ್ನು ನಿರ್ಮಾಣಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ - ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬನ್ನು ತನಗೆ ಸೇರಿಸಿಕೊಳ್ಳಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.


ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.


ಆತನು ಜಗದುತ್ಪತ್ತಿಗೆ ಮೊದಲೇ ಗೊತ್ತು ಮಾಡಲ್ಪಟ್ಟು ಅಂತ್ಯಕಾಲದಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.


ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೂ ಪವಿತ್ರಾತ್ಮಭರಿತನಾಗಿರುವನು.


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಯಾಕೋಬವಂಶವೇ, ಇಸ್ರಾಯೇಲ್ ಸಂತಾನಶೇಷವೇ, ನನ್ನ ಮಾತಿಗೆ ಕಿವಿಗೊಡಿರಿ; ನಿಮ್ಮನ್ನು ಗರ್ಭದಿಂದ ಹೊರುತ್ತಿದ್ದೇನೆ, ಹುಟ್ಟಿದಂದಿನಿಂದ ವಹಿಸುತ್ತಿದ್ದೇನೆ;


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಸರ್ವಕಾರ್ಯಕರ್ತನಾದ ಯೆಹೋವನು, ನಾನೊಬ್ಬನೇ ಗಗನಮಂಡಲವನ್ನು ಹರವಿ ಭೂಮಂಡಲವನ್ನು ವಿಸ್ತರಿಸುವವನಾಗಿದ್ದೇನೆ; ನನಗೆ ಸಹಾಯಕನುಂಟೋ?


ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಸಮಾಧಾನವನ್ನು ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.


ನನ್ನ ರಕ್ಷಣಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವದು; ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.


ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ; ಜನಾಂಗಗಳು [ಎಷ್ಟಾದರೂ] ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತಾಡಲಿ; ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗುವ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಮೂಡಣವರೇ, ಯೆಹೋವನನ್ನು ಸನ್ಮಾನಿಸಿರಿ; ಕರಾವಳಿಯವರೇ, ಇಸ್ರಾಯೇಲ್ಯರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ ಎಂದು ಕೂಗುವರು.


ದೂರಸ್ಥರೇ, ನಾನು ನಡಿಸಿದ್ದನ್ನು ಕೇಳಿರಿ; ಸಮೀಪಸ್ಥರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ.


ನಿನ್ನ ಹೆಸರುಹಿಡಿದು ಕರೆಯುವ ನಾನು ಯೆಹೋವನು, ಇಸ್ರಾಯೇಲ್ಯರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಪಾಸ್ತಿಯನ್ನೂ ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.


ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು