Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:10 - ಕನ್ನಡ ಸತ್ಯವೇದವು J.V. (BSI)

10 ಅವರಿಗೆ ಹಸಿವೆ ಬಾಯಾರಿಕೆಗಳು ಆಗವು. ಝಳವೂ ಬಿಸಿಲೂ ಬಡಿಯವು; ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರುಕ್ಕುವ ಒರತೆಗಳ ಬಳಿಯಲ್ಲಿ ನಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:10
28 ತಿಳಿವುಗಳ ಹೋಲಿಕೆ  

ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.


ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಇವನಿಗೆ ಆಶ್ರಯವು ಗಿರಿದುರ್ಗ, ಅನ್ನವು ಉಚಿತವಾಗಿ ಒದಗುವದು, ನೀರೂ ನಿಸ್ಸಂದೇಹ.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ಬೆಂಗಾಡು ಸರೋವರವಾಗುವದು; ಒಣನೆಲದಲ್ಲಿ ಬುಗ್ಗೆಗಳುಕ್ಕುವವು; ನರಿಗಳು ಮಲಗುತ್ತಿದ್ದ ಹಕ್ಕೆಯು ಆಪುಜಂಬುಗಳ ಪ್ರದೇಶವಾಗುವದು.


ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಹಗಲಿನ ಬಿಸಿಲಲ್ಲಿ ನೆರಳನ್ನೂ ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಮಂಟಪವಿರುವದು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಅವರಿಗೆ - ಜೀವಕೊಡುವ ರೊಟ್ಟಿ ನಾನೇ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ, ನನ್ನನ್ನು ನಂಬುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.


ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು.


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು.


ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.


ಆತನು ಅವರನ್ನು ಮರುಭೂವಿುಯಲ್ಲಿ ನಡಿಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.


[ಸೆರೆಯಲ್ಲಿ] ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು; ಅವನಿಗೆ ಅನ್ನದ ಕೊರತೆಯೇ ಇರದು.


ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು.


ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ಹೀಗಿರಲು ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು