Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:13 - ಕನ್ನಡ ಸತ್ಯವೇದವು J.V. (BSI)

13 ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:13
32 ತಿಳಿವುಗಳ ಹೋಲಿಕೆ  

ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಯೆಹೋವನು ಚೀಯೋನನ್ನು ಸಂತೈಸೇ ಸಂತೈಸುವನು; ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ ಬೀಳುಭೂವಿುಯನ್ನು ಯೆಹೋವನ ವನದ ಹಾಗೂ ಕಳಕಳಿಸುವಂತೆ ಮಾಡುವನು; ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ, ಇವುಗಳು ಅಲ್ಲಿ ನೆಲೆಯಾಗಿರುವವು.


ಯೆರೂಸಲೇವಿುನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟಗುಡ್ಡಗಳು ನಿಮ್ಮ ಮುಂದೆ ಜಯ ಘೋಷಮಾಡುವವು, ಅಡವಿಯ ಮರಗಳೆಲ್ಲಾ ಚಪ್ಪಾಳೆಹೊಡೆಯುವವು.


ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.


ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.


ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರೂ ವೃದ್ಧರೂ ಜೊತೆಯಾಗಿ ಹರ್ಷಿಸುವರು; ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನುಂಟುಮಾಡಿ ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.


ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಭೂಮ್ಯಾಕಾಶಗಳೂ ಸಮುದ್ರಗಳೂ ಜಲಚರಗಳೂ ಆತನನ್ನು ಕೊಂಡಾಡಲಿ.


ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.


ಬೆಟ್ಟಗಳೂ ಎಲ್ಲಾ ಗುಡ್ಡಗಳೂ ಹಣ್ಣಿನ ಮರಗಳೂ ಎಲ್ಲಾ ತುರಾಯಿ ಗಿಡಗಳೂ


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆಯಿಂದ ಹಾರಿಹೋಗಿರಿ; ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ, ಭೂವಿುಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ಹೇಳಿರಿ.


ಚೀಯೋನ್ ನಗರಿಯಾದರೋ - ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನಲ್ಲಾ ಅಂದುಕೊಂಡಳು.


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು.


ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.


ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶನವನ್ನು ನೋಡಿ ಹರ್ಷಧ್ವನಿಗೈಯುವವು; ಏಕಂದರೆ ಹಾಳುಮಾಡುವವರು ಬಡಗಲಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳುಮಾಡಿ ಲೋಕವನ್ನೆಲ್ಲಾ ಸಂತೋಷಪಡಿಸುವೆನು.


ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದೆದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.


ನಿನ್ನ ಭುಜವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು