Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:15 - ಕನ್ನಡ ಸತ್ಯವೇದವು J.V. (BSI)

15 ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನಾನು ಹೇಳುವುದೇನೆಂದರೆ, “ಒಬ್ಬ ತಾಯಿಯು ತನ್ನ ಮಗುವನ್ನು ಮರೆತಾಳೇ? ತಾನು ಹೆತ್ತ ಶಿಶುವನ್ನು ತಾಯಿಯು ಮರೆತುಬಿಡುವಳೇ? ಇಲ್ಲ. ಒಂದುವೇಳೆ ತಾಯಿ ತನ್ನ ಮಕ್ಕಳನ್ನು ಮರೆತಾಳು, ಆದರೆ ಯೆಹೋವನಾದ ನಾನು ನಿಮ್ಮನ್ನು ಮರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ ತನ್ನ ಎದೆಹಾಲನ್ನು ಕುಡಿಯುವ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:15
24 ತಿಳಿವುಗಳ ಹೋಲಿಕೆ  

ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ; ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.


ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.


ಇಸ್ರಾಯೇಲು ಕೇವಲ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯನ್ನಿಟ್ಟು ಆ ನನ್ನ ಮಗನನ್ನು ಐಗುಪ್ತದೇಶದಿಂದ ಕರೆದೆನು.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು.


ಕರುಣಿಗಳಾದ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡಿದ್ದಾರೆ; ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಿಗಳಿಗೆ ತಿಂಡಿಯಾದವು.


ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಊಡಿಸುವವಷ್ಟೆ; ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.


ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ ಮಾತಿಗೆ ತಪ್ಪುವವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.


ನೀವು ನಿಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.


ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವದು; ಹುಳವು ಅವನ ಹೆಣವನ್ನು ರುಚಿಯಿಂದ ತಿನ್ನುವದು; ಇನ್ನು ಮೇಲೆ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವದು.


ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.


ದೇವರು ದಯವಿಡಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರುಳುಗಳನ್ನು ಬಿಗಿಹಿಡಿದಿದ್ದಾನೋ? ಸೆಲಾ.


ಏನು, ಕಂದಾ! ನನ್ನ ಗರ್ಭಪುತ್ರನೇ, ಏನು! ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ!


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಚೀಯೋನ್ ನಗರಿಯಾದರೋ - ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನಲ್ಲಾ ಅಂದುಕೊಂಡಳು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಇಸ್ರಾಯೇಲ್ಯರ ಸದಮಲಸ್ವಾವಿುಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು