Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:20 - ಕನ್ನಡ ಸತ್ಯವೇದವು J.V. (BSI)

20 ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು - ಸ್ಥಳವು ನನಗೆ ಸಂಕೋಚ, ನಾನು ವಾಸಿಸುವದಕ್ಕೆ ಸ್ಥಳವಾಗುವಂತೆ ಸರಿದುಕೋ ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು, ‘ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ’ ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಸರಿದುಕೊ, ನಮಗೆ ಸ್ಥಳಾವಕಾಶ ಸಾಲದು” ಎಂದು ಪೇಳ್ವರು ನಿನ್ನ ಕಿವಿಯೊಳು ಮಕ್ಕಳು ನೀ ಪರದೇಶಿಯಾಗಿದ್ದಾಗ ನಿನಗೆ ಹುಟ್ಟಿದಾ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕಳೆದುಹೋದ ನಿನ್ನ ಮಕ್ಕಳಿಗಾಗಿ ನೀನು ವ್ಯಸನವಾಗಿದ್ದಿ. ಆದರೆ ಆ ಮಕ್ಕಳು, ‘ಈ ದೇಶವು ನಮಗೆ ಸಾಲುವದಿಲ್ಲ. ಇದಕ್ಕಿಂತ ದೊಡ್ಡ ದೇಶ ನಮಗೆ ಕೊಡು’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ದುಃಖದ ಸಮಯದಲ್ಲಿ ಜನಿಸಿದ ಮಕ್ಕಳು ‘ಸ್ಥಳವು ನನಗೆ ಇಕ್ಕಟ್ಟಾಯಿತು. ನಾನು ವಾಸಿಸುವುದಕ್ಕೆ ಸ್ಥಳಕೊಡು,’ ಎಂದು ಇನ್ನೂ ನಿಮ್ಮ ವಿಚಾರಣೆಯಲ್ಲಿ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:20
11 ತಿಳಿವುಗಳ ಹೋಲಿಕೆ  

ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರುತ್ತಿದ್ದಾರೆ; ಗಂಡು ಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.


ಯೆಹೋವನು ಚೀಯೋನನ್ನು ಸಂತೈಸೇ ಸಂತೈಸುವನು; ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ ಬೀಳುಭೂವಿುಯನ್ನು ಯೆಹೋವನ ವನದ ಹಾಗೂ ಕಳಕಳಿಸುವಂತೆ ಮಾಡುವನು; ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ, ಇವುಗಳು ಅಲ್ಲಿ ನೆಲೆಯಾಗಿರುವವು.


ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ - ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರವ ಈ ಸ್ಥಳವು ಬಲು ಇಕ್ಕಟ್ಟಾಗಿದೆ.


ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡಿಸುವ ಕೆಲಸವನ್ನು ನೋಡಿ ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾವಿುಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲ್ಯರ ದೇವರಿಗೆ ನಡುಗುವರು.


ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು - ಯೆರೂಸಲೇವಿುನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವದರಿಂದ ಅದು ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವದು.


ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದುಲೆಬನೋನುಗಳ ಪ್ರಾಂತಕ್ಕೆ ಬರಮಾಡುವೆನು; ಅವರಿಗೆ ಸಾಕಾದಷ್ಟು ಸ್ಥಳ ಸಿಕ್ಕದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು