Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:24 - ಕನ್ನಡ ಸತ್ಯವೇದವು J.V. (BSI)

24 ಶೂರನಿಂದ ಕೊಳ್ಳೆಯನ್ನು ಕಸುಕೊಳ್ಳಬಹುದೇ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೇ [ಎಂದುಕೊಳ್ಳುತ್ತೀಯಾ]?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬಲಾಢ್ಯನಿಂದ ಕೊಳ್ಳೆಯನ್ನು ಕಸಿದುಕೊಳ್ಳಲಾದೀತೆ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯುದ್ಧವೀರನು ಯುದ್ಧದಲ್ಲಿ ಕೊಳ್ಳೆಹೊಡೆದದ್ದನ್ನು ನೀನು ಅವನಿಂದ ಕಿತ್ತುಕೊಳ್ಳಲಾರೆ. ಬಲಿಷ್ಠ ಸೈನಿಕನು ಯುದ್ಧ ಕೈದಿಯನ್ನು ಕಾವಲು ಕಾಯುವಾಗ ಆ ಕೈದಿಯು ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯವರನ್ನು ಬಿಡಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:24
17 ತಿಳಿವುಗಳ ಹೋಲಿಕೆ  

ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಅ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.


ಆತನು ನನ್ನನ್ನು - ನರಪುತ್ರನೇ, ಈ ಎಲುಬುಗಳಿಗೆ ಜೀವವು ಬರಬಹುದೋ ಎಂದು ಕೇಳಲು ನಾನು - ಕರ್ತನಾದ ಯೆಹೋವನೇ, ನೀನೇ ಬಲ್ಲೆ ಎಂದುತ್ತರಕೊಟ್ಟೆನು.


ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ; ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ; ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಅನ್ನರು.


ನಮ್ಮ ದುಷ್ಕರ್ಮಮಹಾಪರಾಧಗಳ ನಿವಿುತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ ನಮ್ಮಲ್ಲಿ ಇಷ್ಟು ಮಂದಿಯನ್ನು ಉಳಿಸಿದಿ;


ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.


ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ.


ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ನಮ್ಮ ಕಾಯಗಳ ಮೇಲೆಯೂ ಪಶುಗಳ ಮೇಲೆಯೂ ಅವರು ಅಧಿಕಾರ ನಡಿಸುತ್ತಾರೆ. ನಾವು ಮಹಾಸಂಕಟದಲ್ಲಿರುತ್ತೇವೆ ಅಯ್ಯೋ ಎಂದು ಪ್ರಾರ್ಥಿಸಿದರು.


ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ಧರ್ಮಸ್ವರೂಪನೇ; ನೀನು ಸತ್ಯವನ್ನೇ ನಡಿಸಿದಿ, ನಾವಾದರೋ ದುಷ್ಟರು.


ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದಕ್ಕಾಗುವದಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.


ಸಿಂಹದಂತೆ ಗರ್ಜಿಸುತ್ತಾರೆ, ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ, ಗುರುಗುಟ್ಟುತ್ತಾ ಬೇಟೆಹಿಡಿದು ಹೊತ್ತುಕೊಂಡು ಹೋಗುತ್ತಾರೆ, ರಕ್ಷಿಸುವವರು ಯಾರೂ ಇಲ್ಲ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ನುಂಗಿಬಿಡುವದು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು, ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು