Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:25 - ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಯೆಹೋವನು ಹೇಳುವುದೇನೆಂದರೆ, “ಕೈದಿಗಳು ತಪ್ಪಿಸಿಕೊಳ್ಳುವರು. ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; ನಿನ್ನ ಮಕ್ಕಳನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:25
39 ತಿಳಿವುಗಳ ಹೋಲಿಕೆ  

ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವದು.


ಯೆರೂಸಲೇವಿುನ ಮೇಲೆ ಯುದ್ಧಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯನ್ನು ತಗಲಿಸುವನು - ಹೆಜ್ಜೆಯ ಮೇಲೆ ನಿಂತ ನಿಂತ ಹಾಗೆಯೇ ಅವರ ಮಾಂಸವು ಕೊಳೆತುಹೋಗುವದು, ಕಣ್ಣು ಗುಣಿಯಲ್ಲೇ ಇಂಗುವದು, ನಾಲಿಗೆಯು ಬಾಯಲ್ಲೇ ಕ್ಷಯಿಸುವದು.


ಜನಾಂಗದವರು ಅವರನ್ನು ಕರತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡುಹೆಣ್ಣಾಳುಗಳನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡಿಸುವರು.


ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ಕತ್ತಿನಿಂದಲೂ ತೊಲಗುವವು; ನೀವು ಪುಷ್ಟರಾದ ಕಾರಣ ನೊಗವು ಮುರಿದು ಹೋಗುವದು.


ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.


[ನನ್ನ ಜನವೇ,] ನೀನು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.


ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ರಾಜ್ಯವು ಎಪ್ಪತ್ತು ವರುಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.


ಆಗ ಯೆಹೋವನು ಹೊರಟು ಯುದ್ಧದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದಕ್ಕಾಗುವದಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.


ಯೆಹೋವನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ವ್ಯಾಜ್ಯವಾಡು; ನನ್ನ ಮೇಲೆ ಯುದ್ಧಮಾಡುವವರ ಸಂಗಡ ಯುದ್ಧಮಾಡು.


ಸಿಂಹದಂತೆ ಗರ್ಜಿಸುತ್ತಾರೆ, ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ, ಗುರುಗುಟ್ಟುತ್ತಾ ಬೇಟೆಹಿಡಿದು ಹೊತ್ತುಕೊಂಡು ಹೋಗುತ್ತಾರೆ, ರಕ್ಷಿಸುವವರು ಯಾರೂ ಇಲ್ಲ.


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಅವು ಐಗುಪ್ತದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ ಸಾಕ್ಷಿಯಾಗಿಯೂ ಇರುವವು; ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನುದ್ಧರಿಸುವನು.


ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ಯೆರೂಸಲೇವಿುನ ಸಂಗಡ ಹೃದಯಂಗಮವಾಗಿ ಮಾತಾಡಿರಿ; ಅದಕ್ಕೆ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ನಿನ್ನ ಕರ್ತನೂ ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೇಹೋವನು ಹೀಗನ್ನುತ್ತಾನೆ - ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ ನನ್ನ ರೋಷವು ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು; ಅದನ್ನು ನೀನು ಇನ್ನು ಕುಡಿಯೆ;


ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು; ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ನುಂಗಿಬಿಡುವದು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು, ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.


ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಅವನ ಮಕ್ಕಳೂ ಬಿಡುಗಡೆಯಾಗಬೇಕು.


[ಸೆರೆಯಲ್ಲಿ] ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು; ಅವನಿಗೆ ಅನ್ನದ ಕೊರತೆಯೇ ಇರದು.


ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ, ಅವರಿಗಿಂತ ಬಲಿಷ್ಟರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು