Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:3 - ಕನ್ನಡ ಸತ್ಯವೇದವು J.V. (BSI)

3 ಆತನು ನನಗೆ - ನೀನು ನನ್ನ ಸೇವಕನೂ ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆತನೆನಗೆ ಇಂತೆಂದ : “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಹೀಗೆಂದನು: “ಇಸ್ರೇಲೇ, ನೀನೇ ನನ್ನ ಸೇವಕನು. ನಾನು ನಿನಗೆ ಆಶ್ಚರ್ಯವಾದ ಕಾರ್ಯಗಳನ್ನು ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆತನು ನನಗೆ, “ನೀನು ನನ್ನ ಸೇವಕನು. ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:3
20 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಮಾಡಬೇಕೆಂದು ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ನಿನ್ನನ್ನು ಭೂಲೋಕದಲ್ಲಿ ಮಹಿಮೆಪಡಿಸಿದೆನು.


ಮಹಾಯಾಜಕನಾದ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಹಕಾರಿಗಳೂ ಕೇಳಿರಿ; ಇಗೋ, ಮೊಳಿಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೇನೆಂಬದಕ್ಕೆ ಇವರೇ ಮುಂಗುರುತು.


ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ನೀವು ಬಹಳ ಫಲಕೊಡುವದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವದು; ಮತ್ತು ನನ್ನ ಶಿಷ್ಯರಾಗುವಿರಿ.


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಅದಕ್ಕೆ - ಮಹಿಮೆಪಡಿಸಿದ್ದೇನೆ, ತಿರಿಗಿ ಮಹಿಮೆಪಡಿಸುವೆನು ಎಂದು ಆಕಾಶವಾಣಿಯಾಯಿತು.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು