Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:4 - ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನಾನು “ನಾನು ಕಷ್ಟಪಟ್ಟು ಮಾಡಿದ ಕಾರ್ಯಗಳೆಲ್ಲವೂ ನಿಷ್ಪ್ರಯೋಜನವಾದವು. ನಾನು ನನ್ನನ್ನೇ ಸವೆಯಿಸಿದೆನು. ಆದರೆ ಪ್ರಯೋಜನವಾದದ್ದನ್ನು ನಾನು ಮಾಡಲಿಲ್ಲ. ನಾನು ನನ್ನ ಶಕ್ತಿಯನ್ನೆಲ್ಲಾ ಉಪಯೋಗಿಸಿದರೂ ಏನೂ ಮಾಡಲಾಗಲಿಲ್ಲ. ಆದ್ದರಿಂದ ನನಗೆ ಮಾಡಬೇಕಾದುದನ್ನು ಯೆಹೋವನೇ ತೀರ್ಮಾನಿಸಲಿ. ನನಗೆ ದೊರಕಬೇಕಾದ ಬಹುಮಾನವನ್ನು ದೇವರೇ ತೀರ್ಮಾನಿಸಲಿ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:4
28 ತಿಳಿವುಗಳ ಹೋಲಿಕೆ  

ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.


ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ಭಯಪಡುತ್ತೇನೆ.


ನಾನಂತೂ ನನಗಿರುವದನ್ನು ನಿಮ್ಮ ಆತ್ಮಸಂರಕ್ಷಣೆಗೋಸ್ಕರ ಅತಿಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರೋ?


ರಕ್ಷಣಾಮಾರ್ಗದಲ್ಲಿರುವವರಲ್ಲಿಯೂ ನಾಶನಮಾರ್ಗದಲ್ಲಿರುವವರಲ್ಲಿಯೂ ನಾವು ದೇವರ ಮುಂದೆ ಕ್ರಿಸ್ತನ ಪರಿಮಳವಾಗಿದ್ದೇವೆ.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.


ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರ ವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.


ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನೊಂದಿಗಿದೆ, ಆತನು ಅನುಗ್ರಹಿಸುವ ಪ್ರತಿಫಲವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ ಎಂಬದಾಗಿ ಯೆಹೋವನು ಭೂವಿುಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಆಹಾ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು; ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದಿದೆ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು - ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತಾಡುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನೆಂದು ಹೇಳುತ್ತಾನೆ.


ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.


ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ


ನನ್ನನ್ನು ತೊರೆದು ಮನಸ್ಸುಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈ ಚಾಚಿ ಕರೆದೆನು.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವದು; ನಿಮ್ಮ ಭೂವಿುಯಲ್ಲಿ ಬೆಳೆಯಾಗುವದಿಲ್ಲ, ತೋಟಗಳ ಮರಗಳು ಫಲಿಸುವದಿಲ್ಲ.


ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಕೆಲಸ ಸಾಧಿಸಿದ್ದೂ ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಉತ್ಸಾಹವು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವದು.


ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು; ನ್ಯಾಯತೀರ್ಪು ಯೆಹೋವನಿಂದಲೇ ಆಗುವದು.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು.


ಯಾಕೋಬೇ, ಇಸ್ರಾಯೇಲೇ, ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ ಎಂದು ಏಕೆ ಅಂದುಕೊಳ್ಳುತ್ತೀ?


ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ನುಡಿಯುತ್ತಾನೆ.


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯವರಿಗೂ ಪ್ರತಿಕ್ರಿಯೆಮಾಡುವನು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು